ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಸಿದ ಬೆನ್ನಿಗೇ ರಾಜ್ಯ ಸರ್ಕಾರವೂ ಬೆಲೆ ಇಳಿಕೆ ನಿರ್ಧಾರ ಕೈಗೊಂಡಿದ್ದು, ಪೆಟ್ರೋಲ್-ಡೀಸೆಲ್ ಬೆಲೆ ಮತ್ತಷ್ಟು ಇಳಿಕೆ ಆಗಲಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 5 ರೂ.ಹಾಗೂ ಡೀಸೆಲ್ ಮೇಲೆ 10 ರೂ. ಅಬಕಾರಿ ಸುಂಕವನ್ನು ಇಳಿಸುವ ಕುರಿತ ನಿರ್ಧಾರವನ್ನು ಇಂದು ಪ್ರಕಟಿಸಿತ್ತು. ಮಾತ್ರವಲ್ಲದೆ ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿರುವುದಾಗಿ ಹೇಳಿದೆ.
ಇದಾದ ಕೆಲವೇ ನಿಮಿಷಗಳಲ್ಲಿ ಕರ್ನಾಟಕ ಸರ್ಕಾರ ಕೂಡ ಪೆಟ್ರೊಲ್-ಡೀಸೆಲ್ ಬೆಲೆ ಇಳಿಸಲಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಮೇಲೆ ತಲಾ 7 ರೂ. ಇಳಿಸಲಿರುವುದಾಗಿ ಅವರು ಹೇಳಿದ್ದಾರೆ. ಹೊಸ ದರ ನಾಳೆ ಸಂಜೆಯಿಂದ ಜಾರಿಗೆ ಬರಲಿದ್ದು, ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ಅಂದಾಜು 95.50 ರೂ. ಹಾಗೂ ಡೀಸೆಲ್ ಬೆಲೆ 81.50 ರೂ. ಆಗಲಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಅಂದಾಜು 2,100 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದೂ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.
ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
2/3— Basavaraj S Bommai (@BSBommai) November 3, 2021
ಹಲವು ದಿನಗಳಿಂದ ಜನಸಾಮಾನ್ಯರ ಮೇಲೆ ಹೊರೆಯಾಗಿದ್ದ ಪೆಟ್ರೋಲ್-ಡೀಸೆಲ್ ದರ, ಇದೀಗ ಕೊಂಚ ಇಳಿಕೆಯನ್ನು ಕಂಡಿರುವುದು ಸಮಾಧಾನಕಾರವಾಗಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳು ತೆರಿಗೆಯನ್ನು ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿನ ನಿರಾಳತೆ ಜನಸಾಮಾನ್ಯರಲ್ಲಿ ಮೂಡಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯದ ಕಡಿತ ಸೇರಿ ಪೆಟ್ರೋಲ್ ಗೆ 17 ರೂಪಾಯಿ ಮತ್ತು ಡೀಸೆಲ್ ಗೆ 12 ರೂಪಾಯಿ ಇಳಿಕೆಯಾದಂತಾಗಿದೆ.
ಇದನ್ನೂ ಓದಿರಿ: ದೇಶದ ಜನತೆಗೆ ದೀಪಾವಳಿ ಗಿಫ್ಟ್: ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ., ಡೀಸೆಲ್ ಮೇಲೆ 10 ರೂ. ಕಡಿತ