ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ತಿಳಿಸಲಾಗಿದ್ದು, ರಾಜ್ಯದ ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದ ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಇದೆ ಸ್ಥಿತಿ ಮುಂದುವರೆಯುವ ಸಾಧ್ಯತೆಗಳಿವೆ. ಭಾರಿ ಪ್ರಮಾಣದಲ್ಲಿ ಮಳೆಯಾಗಬಹುದಾದ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.