ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಸ್ವಲ್ಪ ಕಡಿಮೆಯಿದ್ದು, ಜೂ. 28 ರಿಂದ ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಇದಲ್ಲದೇ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮೂರು ದಿನಗಳ ಕಾಲ ಮಳೆಯ ಆರ್ಭಟ ಜೋರಾಗಿ ಇರಲಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿರಿ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟ್ವಿಟ್ಟರ್ ಖಾತೆ ಲಾಕ್ ಮಾಡಿದ ಟ್ವಿಟ್ಟರ್
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಜೂ. 28 ಮತ್ತು 29 ರಂದು ಸಣ್ಣ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಚಿಕ್ಕಮಂಗಳೂರು, ಹಾಸನ, ಕೊಡಗು, ಬೆಂಗಳೂರು ಸೇರಿದಂತೆ ಹಲವು ಬಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.
ಇದನ್ನೂ ಓದಿರಿ: ರೇಖಾ ಕದಿರೇಶ್ ಹತ್ಯೆ: ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಬಂಧನ !