supreme-court-reserves-its-hijab-verdict

ನವದೆಹಲಿ: ಹಿಜಾಬ್ ಪ್ರಕರಣದ ಸಂಬಂಧ ಸುದೀರ್ಘವಾಗಿ ವಾದ, ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ನಾಳೆ (ಆಕ್ಟೋಬರ್ 13) ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಎಂದು ತಿಳಿದು ಬಂದಿದೆ.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ನಿವೃತ್ತರಾಗುವ ಮೊದಲು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ನ್ಯಾಯಪೀಠದ ಮುಖ್ಯಸ್ಥರಾಗಿರುವ ನ್ಯಾಯಮೂರ್ತಿ ಗುಪ್ತಾ ಅವರು ಅಕ್ಟೋಬರ್ 16 ರಂದು ನಿವೃತ್ತರಾಗಲಿರುವುದರಿಂದ ಈ ಅರ್ಜಿಗಳ ಬಗ್ಗೆ ನಾಳೆ ತೀರ್ಪು ಹೊರಬೀಳುವ ನಿರೀಕ್ಷೆಯಿದೆ.

ಉಡುಪಿಯ ಬಾಲಕಿಯರ ಸರ್ಕಾರಿ ಪಿ ಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್‌ಗೆ ತರಗತಿಯಲ್ಲಿ ನಿರ್ಬಂಧ ವಿಧಿಸಿದ ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಚ್‌ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಾಲಾ, ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿತ್ತು. ಅಲ್ಲದೆ, ಹಿಜಾಬ್‌ ಧಾರಣೆ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದೂ ವ್ಯಾಖ್ಯಾನಿಸಿತ್ತು. ಹೈಕೋರ್ಚ್‌ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಚ್‌ ಮೊರೆ ಹೋಗಿದ್ದರು.

ಇದನ್ನೂ ಓದಿರಿ: ಸುಪ್ರೀಂಕೋರ್ಟ್​ನಿಂದ ಹಿಜಾಬ್ ಕುರಿತು ವಿಭಜಿತ ತೀರ್ಪು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here