hijab-verdict-in-supreme-court-of-india-on-karnataka-govts-hijab-ban-order

ದೆಹಲಿ: ಇಡೀ ದೇಶ ಕಾತರದಿಂದ ನೋಡುತ್ತಿದ್ದ ಹಿಜಾಬ್ ವಿವಾದದ ಕುರಿತು ಸುಪ್ರೀಂ ಕೋರ್ಟ್ (Supreme Court of India) ಇಂದು (ಆಕ್ಟೋಬರ್ 13) ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ.

ನ್ಯಾಯಮೂರ್ತಿ ಹೇಮಂತ್ ಗುಪ್ತ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದ್ದು, ಆದರೆ ನ್ಯಾಯಮೂರ್ತಿ ಸುಧಾಂಶು ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದಾರೆ. ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ (Chief Justice Bench) ವರ್ಗಾವಣೆ ಮಾಡಲಾಗಿದೆ.

ನ್ಯಾಯಮೂರ್ತಿ ಸುಧಾಂಶು ಅವರು, ‘ಹಿಜಾಬ್ ನಿಷೇಧ ಸರಿಯಿಲ್ಲ. ಕರ್ನಾಟಕ ಹೈಕೋರ್ಟ್ ತೀರ್ಪು ತಪ್ಪು ದಾರಿಯನ್ನು ತುಳಿದಿದೆ. ಹಿಜಾಬ್ ಧರಿಸುವುದು ಅಂತಿಮವಾಗಿ ಆಯ್ಕೆಯ ಸ್ವಾತಂತ್ರ್ಯವಾಗಿದೆ. ಸಂವಿಧಾನದ ಆರ್ಟಿಕಲ್ 14 ಮತ್ತು ಆರ್ಟಿಕಲ್ 19 ಕೂಡ ಇದನ್ನೇ ಹೇಳುತ್ತದೆ. ಈ ಪ್ರಕರಣದಲ್ಲಿ ಹಿಜಾಬ್ ಇಸ್ಲಾಮ್ ಆಚರಣೆಯ ಅತ್ಯಗತ್ಯ ಪದ್ಧತಿಯೇ ಅಥವಾ ಅಲ್ಲ ಎಂಬ ಹಾದಿಯಲ್ಲಿ ಚರ್ಚೆ ಮಾಡಿದ್ದೇ ತಪ್ಪು. ನನ್ನ ಮನಸ್ಸಿನಲ್ಲಿ ಮುಖ್ಯವಾಗಿ ಹೆಣ್ಣು ಮಗುವಿನ ಶಿಕ್ಷಣ ಕಾಳಜಿ ಇದೆ. ನನ್ನ ಸಹೋದರ ನ್ಯಾಯಾಧೀಶರ ತೀರ್ಪನ್ನು ನಾನು ಗೌರವಯುತವಾಗಿ ಒಪ್ಪುವುದಿಲ್ಲ’ ಎಂದು ಹೇಳಿದ್ದಾರೆ.

ಇನ್ನು ಕರ್ನಾಟಕ ಹೈಕೋರ್ಟ್‌ ನೀಡಿರುವ ಶಾಲೆಗಳಲ್ಲಿ ಹಿಜಾಬ್ ನಿಷೇಧ ತೀರ್ಪನ್ನು ಎತ್ತಿ ಹಿಡಿದಿರುವ ನ್ಯಾಯಮೂರ್ತಿ ಹೇಮಂತ್ ಗುಪ್ತ ಅವರು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ 26 ಅರ್ಜಿಗಳನ್ನು ವಜಾ ಮಾಡಿದರು. ಸರ್ಕಾರದ ಆದೇಶವನ್ನು ಸಕ್ರಮಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿದ್ದಾರೆ. ‘ಮೇಲ್ಮನವಿಗಳ ವಿರುದ್ಧದ ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ ತೀರ್ಪು ಸರಿ ಇದೆ. ಹಾಗಾಗಿ ಮೇಲ್ಮನವಿಗಳನ್ನು ವಜಾಗೊಳಿಸಲು ಮುಂದಾಗಿದ್ದೇನೆ’ ಎಂದು ಹೇಳಿದ್ದಾರೆ.

ಹೆಚ್ಚು ಓದಿದ ಸುದ್ದಿ: ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮುಂದುವರಿಕೆ: ಶಿಕ್ಷಣ ಸಚಿವ ನಾಗೇಶ್

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here