ಹೈಕಮಾಂಡ್ ಬಯಸಿದರೆ ತಕ್ಷಣ ರಾಜೀನಾಮೆ ನೀಡಲು ನಾನು ಸಿದ್ಧ: ಮುಖ್ಯಮಂತ್ರಿ ಯಡಿಯೂರಪ್ಪ

i-am-ready-to-resign-if-high-command-insists-says-cm-b-s-yedyurappa

ಬೆಂಗಳೂರು: ಹೈಕಮಾಂಡ್ ಬಯಸಿದರೆ ನಾನು ತಕ್ಷಣ ರಾಜೀನಾಮೆ ನೀಡಲು ಸಿದ್ಧ ಎನ್ನುವ ಮೂಲಕ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಹೈಕಮಾಂಡ್ ಗೆ ನನ್ನ ಮೇಲೆ ವಿಶ್ವಾಸವಿದೆ, ಅವರು ಎಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರೆಯಲು ಹೇಳುತ್ತಾರೆ ಅಲ್ಲಿಯವರೆಗೆ ಇರುತ್ತೇನೆ ಎಂದು ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಹೈಕಮಾಂಡ್ ಗೆ ಎಲ್ಲಿಯವರೆಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರೆಯುತ್ತೇನೆ. ನನ್ನ ಶಕ್ತಿಮೀರಿ ಕೆಲಸ ಮಾಡುತ್ತಿದ್ದೇನೆ, ಮುಂದೆಯೂ ರಾಜ್ಯದ ಜನತೆಯ ಸೇವೆಗೆ ಮತ್ತು ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪರ್ಯಾಯ ನಾಯಕತ್ವದ ಕುರಿತಂತೆ ಮಾತನಾಡಿ, ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ. ದೇಶ ಹಾಗೂ ರಾಜ್ಯದಲ್ಲಿ ಪರ್ಯಾಯ ನಾಯಕರು ಖಂಡಿತವಾಗಿಯೂ ಇರುತ್ತಾರೆ. ನಾನು ಯಾರನ್ನು ಟೀಕಿಸುವುದಿಲ್ಲ. ಹೈಕಮಾಂಡ್ ಹೇಳಿದರೆ ರಾಜೀನಾಮೆ ನೀಡಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದು ಹೇಳಿ ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

LEAVE A REPLY

Please enter your comment!
Please enter your name here