India Post Recruitment 2023: ಅಂಚೆ ಇಲಾಖೆಯಲ್ಲಿ ನೇರ ನೇಮಕಾತಿ

India Post Recruitment 2023

ಕರ್ನಾಟಕದ ವಿವಿಧ ಅಂಚೆ ಕಚೇರಿಗಳಲ್ಲಿ ಹೊಸ ಅಭ್ಯರ್ಥಿಗಳನ್ನು ನೇರ ನೇಮಕಾತಿ ಅಧಿಸೂಚನೆ (India Post Recruitment 2023) ಮೂಲಕ ಸೇರಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರೆ ತಪ್ಪದೇ ನಮ್ಮ ಟೆಲಿಗ್ರಾಮ್ ಚಾನಲ್ ಹಾಗೂ ವಾಟ್ಸಾಪ್ ಚಾನಲ್ ಗಳಿಗೆ ತಾವು ಜಾಯಿನ್ ಆಗಬಹುದು.(Followers phone numbers are not revealed)

ಹುದ್ದೆಯ ಮಾಹಿತಿ

ಅಂಚೆ ಇಲಾಖೆ ಖಾಲಿಯಿರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಕರ್ನಾಟಕದಲ್ಲಿ ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದು, ಆ ಹುದ್ದೆಗೆ ಸಂಬಂಧಿಸಿದ ಕೆಲವು ಮಹತ್ವದ ಮಾಹಿತಿಗಳು ಈ ಕೆಳಗಿನಂತಿವೆ.

ಉದ್ಯೋಗ ನೀಡುತ್ತಿರುವ ಸಂಸ್ಥೆಅಂಚೆ ಇಲಾಖೆ
ಹುದ್ದೆಯ ಹೆಸರುಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು6
ಮಾಸಿಕ ವೇತನರೂಪಾಯಿ 19,900/- ರಿಂದ 63,200/-
ಅರ್ಜಿ ಸಲ್ಲಿಸಲು ಕೊನೆ ದಿನಾಂಕ30 ನವೆಂಬರ್ 2023

ವಿದ್ಯಾರ್ಹತೆ

ಅಂಚೆ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ನೇಮಕ ಮಾಡಿಕೊಳ್ಳಲಿರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸುವ ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು. ಅಲ್ಲದೇ ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಇದನ್ನು ಓದಿರಿ: AAICLAS Recruitment 2023: 436 ಅಸಿಸ್ಟೆಂಟ್‌ ಹುದ್ದೆಗಳಿಗೆ ದ್ವಿತೀಯ ಪಿಯು ಪಾಸಾದವರು ಅರ್ಜಿ ಸಲ್ಲಿಸಿ

ವೇತನ

India Post Recruitment 2023 ರ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 19,900/- ರಿಂದ 63,200/- ರೂಪಾಯಿಗಳ ವರೆಗೆ ನೀಡುವುದಾಗಿ ತಿಳಿಸಲಾಗಿದೆ.

ಆಯ್ಕೆ ವಿಧಾನ

ಅಂಚೆ ಇಲಾಖೆ ಕರೆದಿರುವ (India Post Recruitment 2023) ಸ್ಟಾಪ್ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಚಾಲನ ಪರವಾಗಿ ಡ್ರೈವಿಂಗ್ ಟೆಸ್ಟ್ ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

O/O ಹಿರಿಯ ವ್ಯವಸ್ಥಾಪಕ,
ಮೇಲ್ ಮೋಟಾರ್ ಸೇವೆ,
C-121, ನರೇನ್ ಇಂಡಸ್ಟ್ರಿಯಲ್ ಏರಿಯಾ ಹಂತ-E,
ನರೇನ್, ನವದೆಹಲಿ-110028

India Post Recruitment 2023 ರ ಹುದ್ದೆಗಳ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 4 ಅಕ್ಟೋಬರ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ನವೆಂಬರ್ 2023

ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ವಾಟ್ಸಾಪ್ ಚಾನಲ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಚಾನಲ್ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here