indian-army-recruitment-2021-apply-online-for-technical-entry-scheme-46-course-posts

ಭಾರತೀಯ ಸೇನೆ (Indian Army) ಯು ತನ್ನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.

ಭಾರತೀಯ ಸೇನೆಯಲ್ಲಿ ಕಾಲಿಯಿರುವ ಟೆಕ್ನಿಕಲ್ ಎಂಟ್ರಿ ಸ್ಕೀಮ್ 46 ಕೋರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದ್ದಾಗಿದ್ದು, 12 ನೇಯ ತರಗತಿಯನ್ನು ಶೇ. 60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಒಟ್ಟು ಹುದ್ದೆಗಳು

ಟೆಕ್ನಿಕಲ್ ಎಂಟ್ರಿ ಸ್ಕೀಮ್ 46 ಕೋರ್ಸ್ ಹುದ್ದೆ – 90

ವಿದ್ಯಾರ್ಹತೆ

ಭಾರತೀಯ ಸೇನೆಯ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಶೇಕಡಾ 60 ಅಂಕಗಳೊಂದಿಗೆ 12 ನೇ ತರಗತಿ ಉತ್ತೀರ್ಣರಾಗಿರಬೇಕು. ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಓದಿರಬೇಕು. ಅಭ್ಯರ್ಥಿಯು ಜೆಇಇ ಮೇನ್ಸ್​-2021 ಪರೀಕ್ಷೆಯನ್ನು ಬರೆದಿರಬೇಕು.

ವಯೋಮಿತಿ

ಭಾರತೀಯ ಸೇನೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಲು 16.5 ವರ್ಷ ತುಂಬಿದ ಮತ್ತು 19.5 ವರ್ಷ ಮೀರಿರದವರಿಗೆ ಮಾತ್ರ ಅವಕಾಶವಿರುತ್ತದೆ. ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಜುಲೈ 02, 2002 ಕ್ಕಿಂತ ಮೊದಲು ಹಾಗೂ ಜುಲೈ 01, 2005 ರ ನಂತರ ಜನಿಸಿರಬಾರದು.

ಇದನ್ನೂ ಓದಿರಿ: ESIC Recruitment 2021: ಇ ಎಸ್ ​ಐ ಸಿ ಬೆಂಗಳೂರು ನೇಮಕಾತಿ 2021

ಸಂಬಳ

ಭಾರತೀಯ ಸೇನೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂಪಾಯಿ 56,100/- ರಿಂದ 2,50,000/- ರೂಪಾಯಿ ವರೆಗೆ ಸಂಬಳ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟಿಂಗ್ ಮಾಡಲಾಗುತ್ತದೆ. ನಂತರದಲ್ಲಿ ಇವರ ದಾಖಲಾತಿಗಳನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ವಯಕ್ತಿಕ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ

ಭಾರತೀಯ ಸೇನೆಯ ಟೆಕ್ನಿಕಲ್ ಎಂಟ್ರಿ ಸ್ಕೀಮ್ 46 ಕೋರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತೀಯ ಸೇನೆಯ ಅಧಿಕೃತ ವೆಬ್ ಸೈಟ್ Join Indian Army ಗೆ ತೆರಳಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಸಲ್ಲಿಸುವ ಮುನ್ನ ನೋಟಿಫಿಕೇಶನ್ ನಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಿ.

ಪ್ರಮುಖ ದಿನಾಂಕ

ಅರ್ಜಿಸಲ್ಲಿಸಲು ಆರಂಭದ ದಿನಾಂಕ: 07/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/11/2021

ಭಾರತೀಯ ಸೇನೆಯ ವೆಬ್ ಸೈಟ್ 
ನೋಟಿಫಿಕೇಶನ್ 

                 Follow us on:
           

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here