ಭಾರತೀಯ ನೌಕಾದಳದಲ್ಲಿ ವಿವಿಧ ನಾವಿಕ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಡಿಸೆಂಬರ್ 25 ರ ಒಳಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.
ವಿದ್ಯಾರ್ಹತೆ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಪಿಯುಸಿ ಉತ್ತೀರ್ಣರಾಗಿರಬೇಕು. ಜೊತೆಗೆ ರಾಷ್ಟ್ರೀಯ/ ರಾಜ್ಯ/ ಅಖಿಲ ಭಾರತ ವಿಶ್ವವಿದ್ಯಾಲಯದ ಹಂತದಲ್ಲಿ ಕ್ರೀಡೆಯಲ್ಲಿ ಚಾಂಪಿಯನ್ಶಿಪ್ ಆಗಿರಬೇಕು.
ವಯೋಮಿತಿ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 17ವರ್ಷದಿಂದ 22 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 21,700 ರಿಂದ ರೂಪಾಯಿ 43,100 ರ ವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲಿಗೆ ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ನಂತರ ಅಗತ್ಯವಿರುವ ಮೆಡಿಕಲ್ ಟೆಸ್ಟ್ ಗಳನ್ನು ನೀಡಬೇಕಿರುತ್ತದೆ. ಇವೆಲ್ಲ ಪ್ರಕ್ರಿಯೆಯಲ್ಲಿ ಸೆಲೆಕ್ಟ್ ಆದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಮೂಲಕ ಭಾರತೀಯ ಸೇನೆಗೆ ತೆಗೆದುಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವ ಅವಶ್ಯಕತೆಯಿರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2021
ಅರ್ಜಿ ಸಲ್ಲಿಸಲು ವಿಳಾಸ:
ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಇದಲ್ಲದೇ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ಸೈಟ್ www.indiannavy.nic.in ಗೆ ಭೇಟಿ ನೀಡಬಹುದು.
ಕಾರ್ಯದರ್ಶಿಗಳು,
ಭಾರತೀಯ ನೌಕಾದಳ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್
ಇಂಟಿಗ್ರೇಟೆಡ್ ಹೆಡ್ಕ್ವಾರ್ಟರ್ಸ್ ಆಫ್ ಮಿನಿಸ್ಟ್ರಿ ಆಫ್ ಡಿಫೆನ್ಸ್
7ನೇ ಮಹಡಿ, ಚಾಣಕ್ಯ ಭವನ
ನವದೆಹಲಿ-110021