ಭಾರತೀಯ ಅಂಚೆ ಇಲಾಖೆ (Indian Post Office Recruitment 2022) ನೇಮಕಾತಿ 2022 ರಲ್ಲಿ 7 ಹುದ್ದೆಗಳು ಖಾಲಿಯಿದ್ದು, ಅವುಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊಟ್ಟಿರುವ ಕೊನೆಯ ದಿನಾಂಕಕ್ಕಿಂತ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅಂಚೆ ಇಲಾಖೆಯಲ್ಲಿ 7 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಂಚೆ ಇಲಾಖೆ ಜನವರಿ 9, 2023 ರಂದು ಕೊನೆಯ ದಿನ ಎಂದು ಮಾಹಿತಿ ನೀಡಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಮತ್ತು ಕೇಂದ್ರ ಸರಕಾರಿ ಉದ್ಯೋಗ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲ್ಲಿ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಹೆಚ್ಚಿನ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ.
ಉದ್ಯೋಗ ಸಂಸ್ಥೆ | ಭಾರತೀಯ ಅಂಚೆ ಇಲಾಖೆ ( Indian Post Office) |
ಹುದ್ದೆಯ ಸಂಖ್ಯೆ | 7 |
ವಿದ್ಯಾರ್ಹತೆ | 8ನೇ ತರಗತಿ ಪಾಸ್ |
ಅರ್ಜಿ ವಿಧಾನ | ಆನ್ ಲೈನ್ ವಿಧಾನ |
ಉದ್ಯೋಗ ಸ್ಥಳ | ಚೆನ್ನೈ |
ವೇತನ | 19,900 – 63,200/- |
ವಿದ್ಯಾರ್ಹತೆ
ಭಾರತೀಯ ಅಂಚೆ ಇಲಾಖೆಯಲ್ಲಿ ಸದ್ಯ 7 ಹುದ್ದೆಗಳು ಕಲಿಯಿದ್ದು, ಅವುಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 8 ನೇ ತರಗತಿ ಪಾಸ್ ಆಗಿರುವ ಕುರಿತು ದಾಖಲಾತಿ ಹೊಂದಿರಬೇಕು.
ಹುದ್ದೆಯ ವಿವರ
ಎಂವಿ ಮೆಕ್ಯಾನಿಕ್ | 4 |
ಎಂವಿ ಎಲೆಕ್ಟ್ರಿಷಿಯನ್ | 1 |
ಕೂಪರ್ ಮತ್ತು ಟಿನ್ಸ್ಮಿತ್ (ನುರಿತ) | 1 |
ಅಪ್ಹೋಲ್ಸ್ಟರ್ (ನುರಿತ) | 1 |
ವಯೋಮಿತಿ
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 01-ಜುಲೈ-2022 ಕ್ಕೆ 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಮತ್ತು ಗರಿಷ್ಠ 30 ವರ್ಷಕ್ಕಿಂತ ಕಡಿಮೆಯಿರಬೇಕು ಎಂದು ಹೇಳಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ
ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಹಾಗೂ ಟ್ರೇಡ್ ಟೆಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿರಿ: Union Bank Recruitment 2022: ಯೂನಿಯನ್ ಬ್ಯಾಂಕ್ನಲ್ಲಿ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ
ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ 100 ರೂಪಾಯಿಗಳು ಮತ್ತು ಪರೀಕ್ಷಾ ಶುಲ್ಕ 400 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಇನ್ನು ಎಸ್ಸಿ, ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಳಾಸ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು.
ಸೀನಿಯರ್ ಮ್ಯಾನೇಜರ್(JAG), ಮೇಲ್ ಮೋಟಾರ್ ಸರ್ವೀಸ್, ನಂ.-37, ಗ್ರೀಮ್ಸ್ ರಸ್ತೆ, ಚೆನ್ನೈ-600006
ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವುದು ಹೇಗೆ ?
- Indian Post Office Recruitment 2022 ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿರಿ. ಹುದ್ದೆಗೆ ಅರ್ಜಿ ಸಲ್ಲಿಸಲು ನೀಡಲಾದ ಮಾನದಂಡಗಳು ನೀವು ಹೊಂದಿರುವಿರೆ ಎಂದು ಪರಿಶೀಲಿಸಿಕೊಳ್ಳಿ.
- ನಂತರ ಅಲ್ಲಿ ಕೇಳಲಾದ ಸ್ವವಿವರ, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಕೆಲಸದ ಅನುಭವವಿದ್ದರೆ ದಾಖಲೆಗಳು ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಪಿಡಿಎಫ್ ವಿಧಾನದಲ್ಲಿ ಸಿದ್ಧಪಡಿಸಿಕೊಳ್ಳಿ.
- ಕೆಳಗೆ ನೀಡಲಾಗಿರುವ ಲಿಂಕನ್ನು ಕ್ಲಿಕ್ ಮಾಡಿ, ಅಲ್ಲಿ ಕೇಳಿರುವ ಅಗತ್ಯ ಮಾಹಿತಿಯನ್ನು ಸರಿಯಾಗಿ ತುಂಬಿರಿ.
- ನೀವು ಯಾವ ವರ್ಗಕ್ಕೆ ಸೇರುತ್ತೀರಿ ಅದಕ್ಕೆ ಸಂಬಂಧಿಸಿದ ಶುಲ್ಕವನ್ನು ಪಾವತಿಸಿ
- ನಂತರ ನಿಮ್ಮ ಫೋಟೋ ಮತ್ತು ಹಸ್ತಾಕ್ಷರವನ್ನು ಸೇರಿಸಿ.
- ಮತ್ತೊಮ್ಮೆ ನೀವು ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಿ. ಆ ನಂತರ ನಿಮ್ಮ ಅರ್ಜಿಯನ್ನು ಸಲ್ಲಿಸಿ.
- ನಂತರ ನೀವು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಿರಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08/12/2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/01/2023
ಪ್ರಮುಖ ಲಿಂಕುಗಳು
ಅಧಿಕೃತ ವೆಬ್‌ಸೈಟ್: ಕ್ಲಿಕ್ ಮಾಡಿ
ಅಧಿಸೂಚನೆ : ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆಗೆ ಲಿಂಕ್ : ಕ್ಲಿಕ್ ಮಾಡಿ
ಅರ್ಜಿ ನಮೂನೆ ಲಿಂಕ್: ಕ್ಲಿಕ್ ಮಾಡಿ