ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ದೆಹಲಿ ನ್ಯಾಯಾಲಯವು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು ಚಿದಂಬರಂ ಅವರನ್ನು ಸೆಪ್ಟೆಂಬರ್ 19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಾಜಿ ಹಣಕಾಸು ಸಚಿವರಿಗೆ ಅವರ ಔಷಧಗಳನ್ನು ಜೈಲಿಗೆ ಕೊಂಡೊಯ್ಯಲು ನ್ಯಾಯಾಲಯ ಅನುಮತಿ ನೀಡಿದೆ ಮತ್ತು ಝೆಡ್ ಪ್ಲಸ್ ರಕ್ಷಣೆ ಇರುವ ತಿಹಾರ್ ಜೈಲಿನ ಪ್ರತ್ಯೇಕ ಕೊಟಡಿಯನ್ನು ನೀಡಲು ನಿರ್ದೇಶನ ನೀಡಿದೆ.
ಕಾಂಗ್ರೆಸ್ ನಾಯಕನ 15 ದಿನಗಳ ಸಿಬಿಐ ಕಸ್ಟಡಿ ಅವಧಿ ಇಂದು ಕೊನೆಗೊಂಡಿದ್ದು, ಆಗಸ್ಟ್ 21 ರ ರಾತ್ರಿ ಆತನ ಬಂಧನದೊಂದಿಗೆ ಪ್ರಾರಂಭವಾದ ವಿಶೇಷ ನ್ಯಾಯಾಲಯವು ಅವರನ್ನು ಐದು ಹಂತಗಳಲ್ಲಿ 15 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಕಳುಹಿಸಿತು. ಸಿಬಿಐ ಅವರನ್ನು ನ್ಯಾಯಾಂಗ ಕಸ್ಟಡಿಗೆ ನೀಡುವಂತೆ ಮಾಡಿದ ಮನವಿಯನ್ನು ಚಿದಂಬರಂ ಅವರ ವಕೀಲರು ವಿರೋಧಿಸಿದರು ಮತ್ತು ಹಗರಣದ ಸಂಪೂರ್ಣ ತನಿಕೆಗೆ ಸಹಕರಿಸಲು ಸಿದ್ಧರಿರುವುದಾಗಿ ಹೇಳಿದರು.

ಐಎನ್ಎಕ್ಸ್ ಪ್ರಕರಣದಲ್ಲಿ ಸಿಬಿಐ ಅನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿನಿಧಿಸಿದರೆ, ಚಿದಂಬರಂ ಅವರನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಪ್ರತಿನಿಧಿಸಿದ್ದಾರೆ. ಯುಪಿಎ ಅಧಿಕಾರಾವಧಿಯಲ್ಲಿ, ಚಿದಂಬರಂ ಅವರು 2004 ರಿಂದ 2014 ರವರೆಗೆ ದೇಶದ ಗೃಹ ಸಚಿವರು ಮತ್ತು ಹಣಕಾಸು ಸಚಿವರಾಗಿದ್ದರು. ಈ ಅವಧಿಯ 2007 ರಲ್ಲಿ 305 ಕೋಟಿ ರೂ. ಅಕ್ರಮಕ್ಕೆ ಸಂಬಂದಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ತರುವಾಯ, ಈ ಸಂಬಂಧ ಜಾರಿ ನಿರ್ದೇಶನಾಲಯವು 2017 ರಲ್ಲಿಯೇ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿತ್ತು.
ಇದನ್ನೂ ಓದಿರಿ: ಇಡಿ ವಶಕ್ಕೆ ಡಿಕೆ ಶಿವಕುಮಾರ್, ಸೆ.13ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್
SPONSORED CONTENT