ದುಬೈ(ಸೆ. 30) : ಇಂದು ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ 37 ರನ್ನುಗಳ ಜಯವನ್ನುಗಳಿಸಿದೆ.
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಫಿಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿದ ಕೊಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 174 ರನ್ನುಗಳನ್ನು ಗಳಿಸಿತು. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಶುಭಮ್ ಗಿಲ್ 47, ಇಯಾಮ್ ಮಾರ್ಗನ್ 34, ಆಂಡ್ರೆ ರಸೈಲ್ 24, ನಿತೀಶ್ ರಾಣಾ 22 ರನ್ ಗಳನ್ನು ಗಳಿಸಿದರು.
ಗೆಲುವಿನ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಾಮ್ ಕುರ್ರನ್ ಅವರ ಅದ್ಬುತ ಬ್ಯಾಟಿಂಗ್ ಸಹಾಯದೊಂದಿಗೆ 9 ವಿಕೆಟ್ ಕಳೆದುಕೊಂಡು 137 ರನ್ನುಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.
ಇನ್ನು ಬೌಲಿಂಗ್ ವಿಭಾಗದಲ್ಲಿ ಕಲ್ಕತ್ತಾ ತಂಡದ ಶಿವಮ್ ಮಾವಿ, ಕಮಲೇಶ್ ನಾಗರಕೋಟಿ , ವರುಣ ಚಕ್ರವರ್ತಿ ತಲಾ ಎರಡೆರಡು ವಿಕೆಟ್ ಕಬಳಿಸಿದರು. ಇನ್ನು ರಾಜಸ್ಥಾನ್ ರಾಯಲ್ಸ್ ಪರ ಜೊಫ್ರಾ ಆರ್ಚರ್ ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.