ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 123 ಕ್ಷೇತ್ರಗಳಲ್ಲಿ ಗೆಲ್ಲಲಿದೆ – ಸಿ ಎಂ ಇಬ್ರಾಹಿಂ

ಸಿ ಎಂ ಇಬ್ರಾಹಿಂ । jds-will-win-123-constituencies-in-the-next-elections-cm-ibrahim

ಯಲ್ಲಾಪುರ: ಪಟ್ಟಣದಲ್ಲಿ ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಮಾತನಾಡಿ, ರಾಜ್ಯ ಸರಕಾರದ ಮೇಲೆ ಜನರು ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರು ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ತರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ, ಎಲ್ಲ ರಂಗದಲ್ಲಿಯೂ ವೈಫಲ್ಯವನ್ನು ಕಾಣುತ್ತಿರುವ ಜಿಜೆಪಿಯನ್ನು ಜನರು ಈ ಬಾರಿ ಸೋಲಿಸಲಿದ್ದಾರೆ. ಜೆಡಿಎಸ್ ಪಕ್ಷ ಈ ಬಾರಿ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ನಡೆಸಿ, ಮುಂಬರುವ ಚುನಾವಣೆಗೆ ಪಕ್ಷದ ಜಿಲ್ಲಾ ಹಾಗೂ ಸ್ಥಳೀಯ ಮುಖಂಡರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು. ಮುಖಂಡರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಶಕ್ತಿ ತುಂಬಬೇಕು ಎಂದು ಹೇಳಿದರು.

ಇದನ್ನೂ ಓದಿರಿ:ನಾಳೆ ಸಿಎಂ ಮನೆ ಎದುರು ರೈತರ ಅಹೋರಾತ್ರಿ ಧರಣಿ

LEAVE A REPLY

Please enter your comment!
Please enter your name here