ಬೀದರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

Jobs in Bidar Women and Child Welfare Development

ಬೀದರ್‌ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು(Jobs in Bidar Women and Child Welfare Development) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಯೋಜಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೀದರ ಉಪನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಕಾರ್ಯಕ್ರಮ ಸಹಾಯಕರ-1 ಹುದ್ದೆ, ಭಾಲ್ಕಿಯ ಶಿಶು ಅಭಿವೃದ್ಧಿ ಕಛೇರಿಯಲ್ಲಿ ತಾಲ್ಲೂಕು ಸಂಯೋಜಕರ-1 ಹುದ್ದೆ ಹಾಗೂ ಸಂತಪೂರ (ಔರಾದ) ಶಿಶು ಅಭಿವೃದ್ಧಿ ಕಛೇರಿಯಲ್ಲಿ ತಾಲ್ಲೂಕು ಸಂಯೋಜಕರ-1 ಹುದ್ದೆ ಸೇರಿ ಒಟ್ಟು-3 ಹುದ್ದೆಗಳನ್ನು ಯೋಜನೆಯು ಜಾರಿಯಲ್ಲಿರುವರೆಗೆ ಮಾತ್ರ ಗೌರವಧನ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.

ಬೀದರ್ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಸಹಾಯಕರು 1
ಭಾಲ್ಕಿ ಶಿಶು ಅಭಿವೃದ್ಧಿ ಯೋಜನೆಯ ಅಡಿ ತಾಲೂಕು ಸಂಯೋಜಕರ ಹುದ್ದೆ 1
ಸಂತಪೂರ್ ನಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಅಡಿ ತಾಲೂಕು ಸಂಯೋಜಕರ ಹುದ್ದೆ 1

ವಿದ್ಯಾರ್ಹತೆ

ಕಾರ್ಯಕ್ರಮ ಸಹಾಯಕರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಯಸುವವರು ಅಧಿಕೃತ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು. ಇನ್ನು ಬ್ಲಾಕ್ ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗೆ ಅಧಿಕೃತ ಮಂಡಳಿಯಿಂದ ಪದವಿಯನ್ನು ಪಡೆದಿರಬೇಕು. ಇದರೊಂದಿಗೆ ಸಾಮಾಜಿಕ ಕಾರ್ಯಕ್ರಮದಲ್ಲಿ ಕನಿಷ್ಠ 3 ಗಳ ಹುದ್ದೆಯ ಅನುಭವ ಹೊಂದಿರಬೇಕು.

ಇದನ್ನೂ ಓದಿರಿ: UAS Dharwad Recruitment 2023:ಲೈಬ್ರರಿ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ವಯೋಮಿತಿ

ಬೀದರ್‌ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ (Jobs in Bidar Women and Child Welfare Development) ಕರೆಯಲಾಗಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಟ 45 ವರ್ಷಗಳು ಮೀರಿರಬಾರದು.

ವೇತನ

ಈ ಹುದ್ದೆಗಳಿಗೆ ಆಯ್ಕೆಯಾಗುವ ಯೋಜನಾ ಸಹಾಯಕರಿಗೆ 18000 ರೂಪಾಯಿಗಳು ಮತ್ತು ಬ್ಲಾಕ್ ಪ್ರಾಜೆಕ್ಟ್ ಸಹಾಯಕರಿಗೆ 20,000 ರೂಪಾಯಿ ಮಾಸಿಕ ವೇತನ ನೀಡುವುದಾಗಿ ತಿಳಿಸಿದ್ದಾರೆ.

ಆಯ್ಕೆ ಪ್ರಕ್ರಿಯೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಬೀದರ್‌ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕರೆಯಲಾಗಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?

ಈ ಹುದ್ದೆಗಳಿಗೆ (Job Opportunity in Bidar Women and Child Welfare Development) ಅರ್ಜಿ ಸಲ್ಲಿಸಲು ಬಯಸುವ ನಿಗಧಿತ ವಿದ್ಯಾರ್ಹತೆ ಹೊಂದಿದ್ದ ಅಭ್ಯರ್ಥಿಗಳು ಅರ್ಜಿಗಳನ್ನು https://bidar.nic.in ಈ ಲಿಂಕ್ ಉಪಯೋಗಿಸಿ ಪಡೆದು ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲಾತಿಗಳು, ಸೇವಾ ಅನುಭವ ಪ್ರಮಾಣ ಪತ್ರ, ವಾಸ ಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ ಪ್ರತಿ ಹಾಗೂ ಸಂಬಂಧಿಸಿದ ಇತರೆ ದಾಖಲೆಗಳನ್ನು ಸಂಬಂಧಿಸಿದ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ಅವರಿಗೆ ನವ್ಹೆಂಬರ್‌ 16 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಇದನ್ನೂ ಓದಿರಿ: KEA Recruitment 2023: 100 ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು

ಪ್ರಕಟಣೆಯ ದಿನಾಂಕ: 11 ಅಕ್ಟೋಬರ್ 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ನವೆಂಬರ್ 2023

ಪ್ರಮುಖ ಲಿಂಕುಗಳು

ಅಧಿಕೃತ ವೆಬ್ ಸೈಟ್ : bidar.nic.in

ಅಧಿಕೃತ ಅಧಿಸೂಚನೆ : ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ಅಥವಾ ದೂರವಾಣಿ ಸಂಖ್ಯೆ: 9972137801, 8217237798 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here