ನವದೆಹಲಿ: ಉತ್ತರಾಖಂಡ್ ನ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ಉಂಟಾಗಿರುವ ಭೂಕುಸಿತಕ್ಕೆ ಸಂಬಂಧಿಸದಂತೆ ಪ್ರಧಾನಿ ನರೇಂದ್ರ ಮೋದಿಯವರು ಮಾಹಿತಿ ಪಡೆದುಕೊಂಡು, ರಾಜ್ಯಕ್ಕೆ ಅಗತ್ಯವಿರುವ ಎಲ್ಲ ಸಹಾಯ, ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದೂರವಾಣಿಯ ಮೂಲಕ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತುಕತೆ ನಡೆಸಿದರು. ಅಲ್ಲಿನ ಸದ್ಯದ ಪರಿಸ್ಥಿತಿ ಕುರಿತಂತೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಜೋಶಿ ಮಠ ಹಾಗೂ ಸುತ್ತಮುತ್ತಲಿನ ಇತರ ನಗರಗಳ ಪರಿಸ್ಥಿತಿಯ ಕುರಿತು ಅವಲೋಕನ ನಡೆಸಲಗುತ್ತಿದೆ. ಜನಸಾಮಾನ್ಯರ ಸುರಕ್ಷತೆ ಮತ್ತು ಪುನರ್ವಸತಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡಲಾಗುವುದು ಎಂದು ಪ್ರಧಾನಿಗಳು ಭರವಸೆ ನೀಡಿದ್ದಾರೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಇದನ್ನೂ ಓದಿರಿ: ಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ !