ನಟ ಜ್ಯೂ. ಏನ್ ಟಿ ಆರ್ ಗೆ ಕೋವಿಡ್-19 ಪಾಸಿಟಿವ್

jr-ntr-tests-positive-for-coronavirus

ತೆಲಗು ಚಿತ್ರರಂಗದ ನಟ ಜೂನಿಯರ್ ಏನ್ ಟಿ ಆರ್ ಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ.

ತಮಗೆ ಸೋಂಕು ತಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಅವರು, ನನ್ನ ಕೋವಿಡ್ -19 ಪರೀಕ್ಷೆಯು ಪಾಸಿಟಿವ್ ಬಂದಿದೆ. ಆದರೆ ಯಾರೂ  ಆತಂಕಪಡುವ ಅಗತ್ಯವಿಲ್ಲ. ನಾನು ಆರೋಗ್ಯವಾಗಿದ್ದೇನೆ. ನಾನು ಮತ್ತು ನನ್ನ ಮನೆಯವರೆಲ್ಲರೂ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದೇವೆ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here