kageri-corona-postitive

ಬೆಂಗಳೂರು: ಕೊರೋನಾ ರಣ ಕೇಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕ್ಷೇತ್ರದಲ್ಲಿ ಇರುವ ವ್ಯಕ್ತಿಗಳಿಗೂ ಸೋಂಕು ತಗಲುವ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಇಂದು ವಿಧಾನ ಸಭೆಯ ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೋನಾ ಸೋಂಕು ತಗುಲಿದೆ.

ಈ ಕುರಿತು ಮಾಹಿತಿ ನೀಡಿರುವ ಅವರ ಆಪ್ತ ಕಾರ್ಯದರ್ಶಿ, ಸೋಂಕು ತಗುಲಿರುವ ಕುರಿತು ವರದಿ ಬಂದಿದ್ದು, ಅವರಿಗೆ ಇದುವರೆಗೆ ಯಾವುದೇ ಸೋಂಕಿನ ಗುಣಲಕ್ಷಣಗಳು ಕಂಡುಬಂದಿಲ್ಲ. ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಸರಕಾರದ ಕೋವಿಡ್ ಮಾರ್ಗಸೂಚಿಯ ಪ್ರಕಾರ ವೈದ್ಯರಿಂದ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಲು ಮನವಿಯನ್ನು ಮಾಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ರಣ ಕೇಕೆ

ರಾಜ್ಯದಲ್ಲಿ ಇಂದು ಕೊರೋನಾ ಆರ್ಭಟ ಜೋರಾಗಿಯೇ ಸಾಗಿದ್ದು, 31,830 ಜನರಿಗೆ ಪಾಸಿಟಿವ್ ವರದಿಗಳು ಬಂದಿವೆ. ಇದಲ್ಲದೇ 180 ಜನರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಂದು ರಾಜ್ಯದಲ್ಲಿ 10793 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here