ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು ಆಗಿರುವ ಎಸ್ ಕೆ ಭಗವಾನ್ ಹಲವು ಚಿತ್ರಗಳನ್ನು ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಸೇರಿ ನಿರ್ಮಿಸಿದ್ದಾರೆ. ಈ ಕಾರಣದಿಂದಾಗಿ ಇವರು ದೊರೈ- ಭಗವಾನ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ಇವರು ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿ ಕನ್ಯೆ, ಚಂದನದ ಗೊಂಬೆ, ವಸಂತ ಗೀತ, ಆಪರೇಷನ್ ಡೈಮಂಡ್ ರಾಕೆಟ್ ಸೇರಿದಂತೆ 50 ಕ್ಕೂ ಹೆಚ್ಚಿನ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿರಿ: Mandeep Roy: ಹಿರಿಯ ನಟ ಮನ್ದೀಪ್ ರಾಯ್ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು