KAPL Recruitment 2023:ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

KAPL Recruitment 2023

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ವೈದ್ಯಕೀಯ(KAPL Recruitment 2023) ಸಲಹೆಗಾರರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

KAPL ನಲ್ಲಿ 1 ಮೆಡಿಕಲ್ ಅಡ್ವೈಸರ್ ಹುದ್ದೆಯು ಖಾಲಿಯಿದ್ದು, ಈ ಹುದ್ದೆಗೆ ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ನವೆಂಬರ್ 24, 2023 ರೊಳಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರೆ ತಪ್ಪದೇ ನಮ್ಮ ಟೆಲಿಗ್ರಾಮ್ ಚಾನಲ್ ಹಾಗೂ ವಾಟ್ಸಾಪ್ ಚಾನಲ್ ಗಳಿಗೆ ತಾವು ಜಾಯಿನ್ ಆಗಬಹುದು.(Followers phone numbers are not revealed)

ಇದನ್ನು ಓದಿ: Labour Card Scholarship 2023: ರೂ 20000 ಸ್ಕಾಲರ್ಶಿಪ್ ಗಾಗಿ ಈಗಲೇ ಅರ್ಜಿ ಸಲ್ಲಿಸಿ

ಉದ್ಯೋಗ ಮಾಹಿತಿ

ಉದ್ಯೋಗ ನೀಡುವ ಸಂಸ್ಥೆ ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್
ಹುದ್ದೆಮೆಡಿಕಲ್ ಅಡ್ವೈಸರ್
ಒಟ್ಟು ಹುದ್ದೆ1
ವೇತನಮಾಸಿಕ ರೂ. 1,50,000
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ24 ನವೆಂಬರ್ 2023

ವಿದ್ಯಾರ್ಹತೆ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಾರ್ಮಕಾಲಜಿಯಲ್ಲಿ ಎಂಬಿಬಿಎಸ್, ಎಂ.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ

KAPL Recruitment 2023 ರ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನಶ್ರೇಣಿ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ವೈದ್ಯಕೀಯ ಸಲಹೆಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂಪಾಯಿ 1,50,000 ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ವಿಧಾನ

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಡೆಸಲಾಗುವುದು ಮತ್ತು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಗುವುದು.

ಇದನ್ನು ಓದಿ: Labour Card Scholarship 2023: ರೂ 20000 ಸ್ಕಾಲರ್ಶಿಪ್ ಗಾಗಿ ಈಗಲೇ ಅರ್ಜಿ ಸಲ್ಲಿಸಿ

KAPL Recruitment 2023 ರ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಸಲ್ಲಿಸಲು ತಿಳಿಸಲಾಗಿದೆ.
ಡೆಪ್ಯುಟಿ ಜನರಲ್ ಮ್ಯಾನೇಜರ್ – HRD
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್
KAPL ಹೌಸ್
ಅರ್ಕಾ ದಿ ಬಿಸಿನೆಸ್ ಸೆಂಟರ್
ಪ್ಲಾಟ್ ನಂ. 37
ಸೈಟ್ ನಂ. 34/4
NTTF ಮುಖ್ಯ ರಸ್ತೆ
2 ನೇ ಹಂತ
ಪೀಣ್ಯ
ಬೆಂಗಳೂರು
ಕರ್ನಾಟಕ-560058

KAPL Recruitment 2023 ರ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11 ನವೆಂಬರ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ನವೆಂಬರ್ 2023

ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಚಾನೆಲ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಚಾನೆಲ್ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here