ಬೆಂಗಳೂರು: ಈ ಬಾರಿ ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಆದರೆ ಕೆಲವು ಮಾನದಂಡಗಳನ್ನು ಇಟ್ಟುಕೊಂಡು ವಿದ್ಯಾರ್ಥಿಗಳ ಅಂಕವನ್ನು ಪ್ರಕಟಿಸುವುದಾಗಿ ಹೇಳಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಖಟವಾಗಲಿದೆ.
ಮಾಧ್ಯಮದೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು, ಇಂದು 4.30 ರ ಸುಮಾರಿಗೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ಈ ಬಾರಿ ಕೊರೋನಾ ಕಾರಣದಿಂದಾಗಿ ಪರೀಕ್ಷೆಗಳನ್ನು ಸರಕಾರ ರದ್ದು ಮಾಡಿ, ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿದ್ದರೂ ಪಿಯು ಬೋರ್ಡ್ ಗ್ರೇಡ್ ಗಳ ಬದಲಾಗಿ ಅಂಕಗಳನ್ನೇ ನೀಡುವುದಾಗಿ ತಿಳಿಸಿದೆ.
ಇಂದು ಪ್ರಕಟವಾದ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಸಮಾಧಾನವಿದ್ದಲ್ಲಿ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದೆ. ಈ ಬಾರಿಯ ಸಿಇಟಿ ರಾಂಕ್ ಪ್ರಕಟಿಸುವಾಗ ಪಿಯು ಅಂಕ ಪರಿಗಣಿಸದೆ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.
ನಿಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿಳಿಯಿರಿ..