ಬೆಂಗಳೂರು: 2023 ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 10-3-2023 ರಿಂದ 29-3-2023 ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.
2023 ರನೇಯ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿರುವ ಪಿಯು ಬೋರ್ಡ್, ವಿದ್ಯಾರ್ಥಿಗಳಿಗೆ ವೇಳಾಪಟ್ಟಿ ಕುರಿತಂತೆ ಆಕ್ಷೇಪಣೆಗಳಿದ್ದರೆ ನವೆಂಬರ್ 21 ರ ಸಂಜೆ 5.30 ರೊಳಗೆ jdexam.dpue@gmail.com ಗೆ ಸಲ್ಲಿಸುವಂತೆ ಕೇಳಿಕೊಂಡಿದೆ.
2023ರ ಮಾರ್ಚ್ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.@BSBommai pic.twitter.com/pVBpV83P8s
— B.C Nagesh (@BCNagesh_bjp) October 21, 2022