karnataka-2nd-puc-results-2020-to-be-announced-tomorrow-at-11-30-am

ಬೆಂಗಳೂರು: ನಾಳೆ ಬೆಳಗ್ಗೆ 11.30 ಕ್ಕೆ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಕಳೆದ ಎಪ್ರಿಲ್ ನಲ್ಲಿ ಪರೀಕ್ಷೆ ನಡೆಸಲಾಗಿದ್ದು, ಬಾಕಿ ಉಳಿದ ಇಂಗ್ಲಿಷ್ ಪರೀಕ್ಷೆಯನ್ನು ಜೂನ್ ನಲ್ಲಿ ನಡೆಸಲಾಗಿತ್ತು.

ಈ ಬಾರಿ 6.75 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಬರೆದಿದ್ದು, ನಾಳೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ನಾಳೆ ಅಧಿಕೃತ ಫಲಿತಾಂಶ ಪ್ರಕಟಗೊಂಡ ನಂತರ ಎಲ್ಲ ವಿದ್ಯಾರ್ಥಿಗಳಿಗೂ ಮೊಬೈಲ್ ಮೂಲಕ ಸಂದೇಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು 12 ಗಂಟೆಯ ನಂತರ ಸರಕಾರದ ಅಧಿಕೃತ ವೆಬ್ ಸೈಟ್ www.karresults.nic.in ನಲ್ಲಿ ನೋಡಬಹುದಾಗಿದೆ.

ಇಂದು ಸಚಿವ ಸುರೇಶ ಕುಮಾರ್ ಅವರು ಮಾತನಾಡಿ ರಾಜ್ಯದಲ್ಲಿ ಈ ಬಾರಿ 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ನಾಳೆ ಫಲಿತಾಂಶ ಹೊರಬೀಳಲಿದೆ. ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ಎಸ್ ಎಂ ಎಸ್ ಮೂಲಕವೂ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here