ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

karnataka-assembly-passes-bill-on-scst-quota-hike

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದೊಂದಿಗೆ ಅಂಗೀಕರಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ 2022 ಅನ್ನು ಕಳೆದ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಇಂದು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಇದನ್ನೂ ಓದಿರಿ: ಭೂಮಿ ದುರ್ಬಳಕೆ ಆರೋಪ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರನ ವಿರುದ್ಧ ದೂರು ದಾಖಲು

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3 ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ.

ಇದನ್ನೂ ಓದಿರಿ: ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ, ಆದ್ರೆ ಮಾಸ್ಕ್ ಕಡ್ಡಾಯ: ಸಚಿವ ಸುಧಾಕರ್

LEAVE A REPLY

Please enter your comment!
Please enter your name here