karnataka-bypolls-bjps-muniratna-wins-by-57672-votes-in-rr-nagara

ಬೆಂಗಳೂರು: ಆರ್ ಆರ್ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ತೀವ್ರ ಪೈಪೋಟಿಯ ಕ್ಷೇತ್ರವಾಗಿ ಗುರುತಿಸಿಕೊಂಡಿದ್ದ ರಾಜರಾಜೇಶ್ವರಿ ನಗರ ಕಣದಲ್ಲಿ ಮುನಿರತ್ನ ಅವರು 57,672 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಮತ ಎಣಿಕೆ ಪ್ರಾರಂಭವಾದಾಗಿನಿಂದ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು 1,25,665 ಮತಗಳನ್ನು ಪಡೆದುಕೊಂಡಿದ್ದಾರೆ. ಇವರ ಪ್ರತಿಸ್ಪರ್ಧಿಯಾದ ಕಾಂಗ್ರೆಸ್ ಪಕ್ಷದ ಕುಸುಮಾ ಅವರು 67,993 ಮತಗಳನ್ನು ಮಾತ್ರ ಪಡೆದುಕೊಳ್ಳುವಲ್ಲಿ ಶಕ್ತರಾಗಿದ್ದು, ಕಾಂಗ್ರೆಸ್ ಭಾರಿ ಹಿನ್ನಡೆಯನ್ನು ಅನುಭವಿಸಿದೆ.

ಮೊದಲು ಕಾಂಗ್ರೆಸ್ ನಲ್ಲಿದ್ದ ಮುನಿರತ್ನ ಅವರು ಇದೇ ಕ್ಷೇತ್ರದಲ್ಲಿ ಕಳೆದ ಎರಡು ಬಾರಿ ಜಯವನ್ನು ಗಳಿಸಿದ್ದರು. ಈ ಬಾರಿ ಅವರು ಬಿಜೆಪಿ ಸೇರಿದ್ದರಿಂದ ಅವರ ವಿರುದ್ಧ ಗೆಲುವು ಸಾದಿಸಬೇಕಾಗಿದ್ದುದು ಕಾಂಗ್ರೆಸ್ ಗೆ ಪ್ರತಿಷ್ಠೆಯಾಗಿ ಪರಿಣಮಿಸಿತ್ತು. ಇದಕ್ಕಾಗಿ ಡಿಕೆ ರವಿ ಅವರ ಪತ್ನಿ ಕುಸುಮಾ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಂಡು ಅಭ್ಯರ್ಥಿಯಾಗಿ ಘೋಷಣೆ ಮಾಡಿದರು. ಅಲ್ಲದೇ ಹೆಚ್ಚಿನ ಮಹತ್ವ ನೀಡಿದ್ದ ಕಾಂಗ್ರೆಸ್ ಡಿಕೆ ಸಹೋದರರ ನೇತೃತ್ವದಲ್ಲಿ ಪ್ರಚಾರವನ್ನು ಕೈಗೊಂಡಿದ್ದರು. ಇದರ ನಡುವೆ ಜನರನ್ನು ಸೆಳೆಯಲು ಆರೋಪ – ಪ್ರತ್ಯಾರೋಪ, ಕಣ್ಣೀರು, ಜಾತಿ ರಾಜಕಾರಣಗಳು ಸಹ ಪ್ರವೇಶ ಪಡೆದಿದ್ದವು. ಇವೆಲ್ಲವುಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರ ಇಂದು ಬಿಜೆಪಿ ಪಾಲಾಗಿದೆ. ಇದರೊಂದಿಗೆ ಈ ಕ್ಷೇತ್ರದಲ್ಲಿ ಜೆಡಿಎಸ್ ಮೂರನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here