ಬೆಂಗಳೂರು: ರಾಜ್ಯದಲ್ಲಿ ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯರ್ಥಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಭಾಷಯ ಕೋರಿದ್ದಾರೆ.
ಈ ಬಾರಿ ಕೊರೋನಾ ಸಾಂಕ್ರಾಮಿಕ ರೋಗದ ಭಯದ ನಡುವೆಯೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ರಾಜ್ಯದಲ್ಲಿ ಎರಡುದಿನ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷೆಯು ಜುಲೈ 19 ಮತ್ತು 22 ರಂದು ನಿಗದಿಯಾಗಿದ್ದು, ಈ ಕುರಿತು ಯಾವುದೇ ಭಯವಿಲ್ಲದೆ ಪರೀಕ್ಷೆಯನ್ನು ಬರೆಯಿರಿ ಎಂದು ಶಿಕ್ಷಣ ಇಲಾಖೆ ಹೇಳಿದೆ.
ಇದನ್ನೂ ಓದಿರಿ: ರಾಜ್ಯದಲ್ಲಿ ಕೊರೋನಾ ಇಳಿಮುಖ: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು ಇಲ್ಲಿದೆ ಸಂಪೂರ್ಣ ಮಾಹಿತಿ
ಈ ಬಾರಿ 8,76,581 ವಿದ್ಯರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಬರೆಯಲಿದ್ದು, 4884 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯರ್ಥಿಗಳಿಗೆ ಮುಖ್ಯಮಂತ್ರಿಗಳು ಶುಭಕೋರಿ ಟ್ವಿಟ್ ಮಾಡಿದ್ದು, “ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು”. ಎಂದು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ.
— B.S. Yediyurappa (@BSYBJP) July 18, 2021