Karnataka Covid Update: ಕರ್ನಾಟಕದಲ್ಲಿ ಇಂದು 2,082 ಜನರಿಗೆ ಕೊವಿಡ್ ದೃಢ, 86 ಜನರು ನಿಧನ

2756-new-covid-cases-found-in-karnataka

ಬೆಂಗಳೂರು: ರಾಜ್ಯದಲ್ಲಿ ಇಂದು 2,082 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದರೊಂದಿಗೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,47,013 ಕ್ಕೆ ಏರಿಕೆಯಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 481 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದಲ್ಲದೇ  ಮಹಾ ಮಾರಿಗೆ 10 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಇದನ್ನೂ ಓದಿರಿ: Karnataka Unlock 3.0: ಬಹುತೇಕ ನಿರ್ಬಂಧಗಳ ಸಡಿಲಿಕೆ; ಅನ್​ಲಾಕ್ ಹೊಸ ಮಾರ್ಗಸೂಚಿ ಘೋಷಿಸಿದ ಬಿ ಎಸ್ ಯಡಿಯೂರಪ್ಪ

ರಾಜ್ಯದಲ್ಲಿ ಇಂದು ಕಳೆದ 24 ಗಂಟೆಗಳಲ್ಲಿ 7,751 ಜನರು ಗುಣಮುಖರಾಗಿದ್ದಾರೆ. ಇದಲ್ಲದೇ ಕರ್ನಾಟಕದಲ್ಲಿ 86 ಜನರು ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ 48,116 ಸಕ್ರಿಯ ಪ್ರಕರಣಗಳಿವೆ.

LEAVE A REPLY

Please enter your comment!
Please enter your name here