ಬೆಂಗಳೂರು: SSLC ಪರೀಕ್ಷೆ ಕೊರೊನಾ ಸೋಂಕಿನ ಭೀತಿಯಿಂದ ಮುಂದೂಡುತ್ತಲೇ ಬಂದು ಇದೇ 25 ರಿಂದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರಕ್ಕೆ ಬಂದಿದೆ. ಈ ಸಂಬಂಧ ಮಾರ್ಗಸೂಚಿಯೊಂದನ್ನು ಪ್ರಕಟಿಸಿ ಆದೇಶ ಹೊರಡಿಸಿದೆ.

ಜೂನ್ 25 ರಿಂದ ಜುಲೈ 4 ರವರೆಗೆ ನಡೆಯುವ SSLC ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಕೆಲವೊಂದಿಷ್ಟು ಮಾರ್ಗಸೂಚಿ ಯನ್ನು ಹೊರಡಿಸಿದೆ…

ಪರೀಕ್ಷೆ ನಡೆಸಲು ಮಾರ್ಗಸೂಚಿಗಳೇನು…?

ವಿದ್ಯಾರ್ಥಿಗಳು ಪರೀಕ್ಷೆಯ ಆರಂಭಕ್ಕೆ ಒಂದೂವರೆ ಗಂಟೆಯ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.

 • ಪರೀಕ್ಷಾ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಸ್ಯಾನಿಸೈಟ್ ಗೆ ಒಳಪಡಿಸಬೇಕು.
 • ಸ್ಯಾನಿಟೈಸ್ ಬಳಿಕ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನೂ ಕೂಡ ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು.
 • ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಕಡ್ಡಾಯವಾಗಿ ಮಾಸ್ಕ್ ಬಳಕೆ ಮಾಡಬೇಕು. ಒಂದೊಮ್ಮೆ ವಿದ್ಯಾರ್ಥಿಗಳು ಮಾಸ್ಕ್ ಮರೆತು ಬಂದಿದ್ದರೆ, ಪರೀಕ್ಷಾ ಕೇಂದ್ರಗಳಲ್ಲಿಯೇ ಮಾಸ್ಕ್ ನೀಡುವ ವ್ಯವಸ್ಥೆಯನ್ನು ಮಾಡಬೇಕು.
 • ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಪಾಲನೆ ಮಾಡುವಂತೆ ಶಿಕ್ಷಕರು ಕ್ರಮವಹಿಸಬೇಕು. (ಅಪ್ಪಿಕೊಳ್ಳುವುದು, ಮುಟ್ಟುವುದು, ಉಗುಳುವುದಕ್ಕೆ ಅವಕಾಶ ಕಲ್ಪಿಸಬಾರದು)
 • ವಿದ್ಯಾರ್ಥಿಗಳು ಅನಾರೋಗ್ಯ ಕಂಡುಬಂದರೆ ಮೇಲ್ವಿಚಾರಕರಿಗೆ ತಿಳಿಸಬೇಕು.
 • ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು.
 • ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿ ಹಾಗೂ ಪರೀಕ್ಷಾ ಕೇಂದ್ರದ ಸಿಬ್ಬಂಧಿಗಳನ್ನು ಹೊರತು ಪಡಿಸಿ, ಪೋಷಕರಾಗಲಿ ಅಥವಾ ಯಾವುದೇ ಇತರ ವ್ಯಕ್ತಿಗಳ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸುವುದು.
 • ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
 • ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಕರೆತರುವ ಬಸ್ಸಿನಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಬೇಕು. ಮಾತ್ರವಲ್ಲ ಬಸ್ಸುಗಳನ್ನು ಸ್ಯಾನಿಟೈಸ್ ಮಾಡಿರಬೇಕು.
 • ಪರೀಕ್ಷಾ ಕೇಂದ್ರದ ಯಾವುದೇ ಅಧಿಕಾರಿಗಳು, ಸಿಬ್ಬಂದಿಗಳು ಯಾವುದೇ ಮಕ್ಕಳೊಂದಿಗೆ ನಿಕಟ ಸಂಪರ್ಕಕ್ಕೆ ಬರುವಂತಿಲ್ಲ.
 • ಶೌಚಾಲಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಮತ್ತು ಸಾಬೂನು ಲಭ್ಯವಿರುವಂತೆ ಮುಖ್ಯ ಅಧೀಕ್ಷಕರು ನೋಡಿಕೊಳ್ಳಬೇಕು.
 • ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಯಾವುದೇ ಸಿಬ್ಬಂದಿಗಳಿಗೆ ಯಾವುದೇ ರೋಗ ಲಕ್ಷಣ ಇಲ್ಲಾ ಎಂದು ಖಚಿತ ಪಡಿಸಿಕೊಳ್ಳಬೇಕು.
 • ಪರೀಕ್ಷಾ ಕೊಠಡಿಯಲ್ಲಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ನೀಡುವ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡಿರಬೇಕು.
 • ಕೊಠಡಿಯ ಮೇಲ್ವಿಚಾರಕರು ತಮ್ಮ ಮೇಜಿನ ಮೇಲೆ ಸ್ಯಾನಿಟೈಸರ್ ಕಡ್ಡಾಯವಾಗಿ ಹೊಂದಿರಬೇಕು.

ಶಿಕ್ಷಣ ಇಲಾಖೆಯು ಈ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಮತ್ತು ಈ ಎಲ್ಲ ಮಾರ್ಗಸೂಚಿಗಳು ಪಾಲನೆಯಾಗುತ್ತಿವೆಯೇ ಎಂದು ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸಬೇಕೆಂದು ಹೇಳಿದೆ.

ಇದನ್ನೂ ಓದಿರಿ: ರಾಜ್ಯದಲ್ಲಿ ಕೊರೊನಾಗೆ 5 ಸಾವು, 249 ಹೊಸ ಪಾಸಿಟಿವ್ ಪ್ರಕರಣಗಳು

LEAVE A REPLY

Please enter your comment!
Please enter your name here