ಅರಣ್ಯ ಇಲಾಖೆ ನೇಮಕಾತಿ: ವಲಯ ಅರಣ್ಯಾಧಿಕಾರಿ ಹುದ್ದೆಗೆ ಪದವೀಧರರಿಂದ ಅರ್ಜಿ ಆಹ್ವಾನ

ಅರಣ್ಯ ಇಲಾಖೆಯು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಲಿಯಿರುವ 10 ವಲಯ ಅರಣ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೊರಲಾಗಿದ್ದು, ಆನ್ ಲೈನ್ ಅಪ್ಲಿಕೇಶನ್ ಸಲ್ಲಿಕೆಗೆ ಕೊನೆಯ ದಿನಾಂಕ 19 ನವೆಂಬರ್ 2022 ಸಂಜೆ 5.30 ರ ವರೆಗೆ ನೀಡಲಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.

ವಿದ್ಯಾರ್ಹತೆ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಅರಣ್ಯ ಶಾಸ್ತ್ರ ವಿಷಯದಲ್ಲಿ ಪಧವೀಧರರಾಗಿರಬೇಕು. ಇದಲ್ಲದೇ ಕೃಷಿ, ಕೆಮಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ಗಳಲ್ಲಿ ಪದವಿಯನ್ನು ಪಡೆದಿದ್ದರೂ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಕರ್ನಾಟಕ ಅರಣ್ಯ ಇಲಾಖೆ ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ 18 ವಯಸ್ಸು ಪೂರ್ಣಗೊಂಡಿರಬೇಕು. ಗರಿಷ್ಟ ವಯೋಮಿತಿ 28 ವರ್ಷಗಳು ಎಂದು ನಿಗದಿಗೊಳಿಸಲಾಗಿದೆ. ಇನ್ನುಳಿದಂತೆ ಎಸ್ಸಿ, ಎಸ್ಟಿ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದ್ದು 31 ವರ್ಷ ವಯೋಮಿತಿ ನಿಗದಿಗೊಳಿಸಲಾಗಿದೆ.

ಅರ್ಜಿ ಶುಲ್ಕ

ಕರ್ನಾಟಕ ಅರಣ್ಯ ಇಲಾಖೆ ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂಪಾಯಿ 200+ ಸೇವಾಶುಲ್ಕ 20 ಮತ್ತು ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳು ರೂಪಾಯಿ 100+ ಸೇವಾಶುಲ್ಕ 20 ಪಾವತಿಸಲು ಕೋರಲಾಗಿದೆ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ. ಅವುಗಳೆಂದರೆ..

  1. ಸಾಮಾನ್ಯ ಜ್ಞಾನ ಮತ್ತು ಆಪ್ಟಿಟ್ಯೂಡ್ ಪರೀಕ್ಷೆ
  2. ಐಚ್ಛಿಕ ವಿಷಯ (ನಿಗದಿಪಡಿಸಿದ ಯಾವುದಾದರೂ ಒಂದು)

ಎರಡು ಪತ್ರಿಕೆಗಳು ತಲಾ 150 ಅಂಕಗಳನ್ನು ಹೊಂದಿರುತ್ತವೆ. ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿ ಇರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

ವೇತನ ಶ್ರೇಣಿ

ಕರ್ನಾಟಕ ಅರಣ್ಯ ಇಲಾಖೆ ಹೊರಡಿಸಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 40,900/- ರಿಂದ 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 20-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-11-2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-11-2022

ನೋಟಿಫಿಕಶನ್ ಓದಿ –          Click Here
ವೆಬ್ ಸೈಟ್ ಗೆ ಭೇಟಿ ನೀಡಿ –    Click Here

ಇದನ್ನೂ ಓದಿರಿ: NTPC Recruitment 2022: ಥರ್ಮಲ್ ಪವರ್ ಕಾರ್ಪೊರೇಷನ್ ​ನಲ್ಲಿ 26 ಎಕ್ಸಿಕ್ಯೂಟಿವ್​ ಹುದ್ದೆಗಳಿಗೆ ಆಹ್ವಾನ

LEAVE A REPLY

Please enter your comment!
Please enter your name here