karnataka-government-reduces-the-fine-amount-for-not-wearing-masks

ಬೆಂಗಳೂರು: ಕರೋನಾ ಸೋಂಕು ನಿಯಂತ್ರಣ ಸಲುವಾಗಿ ಮಾಸ್ಕ್ ಧರಿಸದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರಕಾರ ಆದೇಶವೊಂದನ್ನು ಹೊರಡಿಸಿತ್ತು. ಇದರಿಂದಾಗಿ ಮಾಸ್ಕ ಧರಿಸದೇ ಓಡಾಡುವವರಿಗೆ ಗ್ರಾಮೀಣ ಭಾಗದಲ್ಲಿ 500 ಮತ್ತು ನಗರದಲ್ಲಿ 1000 ದಂಡ ವಿಧಿಸಲಾಗುತ್ತಿತ್ತು. ಈ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡದ ಮೊತ್ತವನ್ನು ಇಳಿಕೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.

ಸರಕಾರದ ಆದೇಶದ ಮೇರೆಗೆ ಪೊಲೀಸರು ರಸ್ತೆಗಳಲ್ಲಿ ಓಡಾಡುವ ಮಾಸ್ಕ್ ಧರಿಸದವರಿಂದ, ದ್ವಿಚಕ್ರ ವಾಹನ ಸವಾರರರಿಂದ, ಕೂಲಿಕಾರ್ಮಿಕರಿಂದ ಒತ್ತಾಯಪೂರ್ವಕವಾಗಿ ವಸೂಲಿ ನಡೆಸಿದ್ದರು. ಈ ರೀತಿಯ ಕ್ರಮಗಳಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಕೆಳವರ್ಗದ ಜನರ ಮೇಲೆ ಮತ್ತೂ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ದಂಡದ ಪ್ರಮಾಣವನ್ನು ಕಡಿತಗೊಳಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ನೂತನ ಆದೇಶದ ಪ್ರಕಾರ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ಮತ್ತು ಗ್ರಾಮೀಣ ಭಾಗದಲ್ಲಿ 100 ರೂ ದಂಡ ವಸೂಲಿ ಮಾಡಲು ತಿಳಿಸಿದೆ.

ಸರಕಾರ ಜನರ ಪ್ರಾಣ ಮತ್ತು ಜೀವನ ಎರಡನ್ನೂ ಕಾಪಾಡುವ ನಿಟ್ಟಿನಲ್ಲಿ ಮಾಸ್ಕ್, ಸೆನಿಟೈಸರ್ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಜನತೆಯಲ್ಲಿ ಕೇಳಿಕೊಳ್ಳುತ್ತದೆ. ಈ ಕಾರ್ಯದಲ್ಲಿ ಸಾರ್ವಜನಿಕರು ಶಾರ್ ಆಕಾರದ ಜೊತೆಗೆ ಕೈಜೋಡಿಸಿ ಕರೋನಾ ತಡೆಗಟ್ಟಲು ಸಹಕರಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿಯನ್ನು ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here