ಬೆಂಗಳೂರು: ಸಿದ್ದರಾಮಯ್ಯ ಸರಕಾರದ ಸಮಯದಲ್ಲಿ ಆರಂಭವಾದ ಅನುಧಾನಿತ ಆಹಾರ ಕ್ಯಾಂಟೀನ್ (ಇಂದಿರಾ ಕ್ಯಾಂಟೀನ್ ) ಗಳನ್ನು ರಾಜ್ಯ ಸರಕಾರ ಮುಚ್ಚುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ ಡಿಕೆ ಶಿವಕುಮಾರ್ ಅವರು, ‘ಸರ್ಕಾರ 40 ಕ್ಯಾಂಟೀನ್‌ಗಳನ್ನು ಮುಚ್ಚುತ್ತಿದೆ ಮತ್ತು ಎಲ್ಲಿ ಮುಚ್ಚಿದರೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕು’ ಎಂದು ಹೇಳಿದರು.
ದೇಶದ ಬಡ ವರ್ಗದವರ ಪರ ಅಪಾರ ಕಾಳಜಿ ಹೊಂದಿದ್ದ ಅವರು ಅವರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದರು. ಕಾಂಗ್ರೆಸ್ ಪಕ್ಷ ಇದಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಆರಂಭಿಸಿತು. ದುರಾದೃಷ್ಟವಶಾತ್ ಬಿಜೆಪಿ ಸರ್ಕಾರ 40 ಇಂದಿರಾ ಕ್ಯಾಂಟೀನ್‌ಗಳಿಗೆ ಬೀಗ ಹಾಕಿದೆ.
2/3
— DK Shivakumar (@DKShivakumar) October 31, 2022
ಇದೇ ಸಮಯದಲ್ಲಿ ಮಾತನಾಡುತ್ತ, ‘ಆಟೋರಿಕ್ಷಾ ಚಾಲಕರು, ಕೂಲಿ ಕಾರ್ಮಿಕರು, ಬಡವರಿಗೆ 10 ರೂ.ಗೆ ಊಟ ಸಿಗುತ್ತದೆ ಎಂಬ ಕಾರಣಕ್ಕೆ ಕ್ಯಾಂಟೀನ್‌ಗಳನ್ನು ಸರ್ಕಾರ ಮುಚ್ಚಬಾರದು. ಬಿಜೆಪಿ ಸರ್ಕಾರ ತನ್ನ ಕಾರ್ಯಕ್ರಮಗಳನ್ನು ಪ್ರಾರಂಭಿಸಬಹುದು ಮತ್ತು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಾರಂಭಿಸಿದ ಯಾವುದೇ ಜನಪರ ಕಾರ್ಯಕ್ರಮಗಳನ್ನು ನಿಲ್ಲಿಸಬಾರದು’ ಎಂದು ಹೇಳಿದರು.
ಇದನ್ನೂ ಓದಿರಿ:ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವ ಆಚರಣೆ: ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ
ಹಲವು ಕ್ಯಾಂಟೀನ್‌ಗಳಿಗೆ ನಿಗದಿತ ಅವಧಿಗೆ ಅನುದಾನ ತಲುಪುತ್ತಿಲ್ಲ. ಪ್ರತೀ ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಿತಿಗತಿಗಳ ಕುರಿತು ವರದಿ ಪಡೆದಿದ್ದೇನೆ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾ ಕ್ಯಾಂಟೀನ್ ಮುಂದೆ ಧರಣಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.