ಬೆಂಗಳೂರು: ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆ ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರಕೈಗೊಂಡಿದೆ. ನವೆಂಬರ್ 17 ರಿಂದ ಪದವಿ, ಎಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳು ಆರಂಭವಾಗಲಿವೆ ಎಂದು ಡಿ ಸಿಎಂ ಅಶ್ಚತ್ಥ ನಾರಾಯಣ ಹೇಳಿದ್ದಾರೆ.
ಶುಕ್ರವಾರ ಮುಖ್ಯಮತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಮಾಹಿತಿ ನೀಡಿದ ಡಿಸಿಎಂ ಅಶ್ವತ್ಥ ನಾರಾಯಣ, ಪದವಿ, ಎಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಕಾಲೇಜುಗಳನ್ನು ಪುನಾರಂಭ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಆಯ್ಕೆ ಇರಲಿದ್ದು, ಆನ್ಲೈನ್ ಹಾಗೂ ಕ್ಲಾಸ್ ರೂಂ ತರಗತಿಗಳು ಸಂಯೋಜಿತವಾಗಿ ಇರಲಿವೆ. ಕ್ಲಾಸ್ ರೂಂಗೆ ಬರಬೇಕಾದರೆ ಪೋಷಕರಿಂದ ಪರವಾನಗಿ ಪತ್ರ ತರಬೇಕು. ಪ್ರಾಕ್ಟಿಕಲ್ ತರಗತಿಗಳ ಆರಂಭಕ್ಕೆ ಮೊದಲ ಆದ್ಯತೆ ನೀಡಲಾಗುವುದು.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಯ ಅನುಸಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕಾಲೇಜುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ, ಸಾಮಾಜಿಕ ಅಂತರ, ಕೋವಿಡ್ ಮಾರ್ಗಸೂಚಿ ಕಡ್ಡಾಯ ಎಂದೂ ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಅಶ್ವತ್ಥನಾರಾಯಣ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಹಾಸ್ಟೆಲ್ಗಳಲ್ಲಿ ಉಳಿದುಕೊಳ್ಳುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಮತ್ತು ತರಗತಿಗಳಿಗೆ ಆಗಮಿಸಲು ಅನುಕೂಲವಾಗುವಂತೆ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಇದೆ ಸಮಯದಲ್ಲಿ ಹೇಳಿದರು.
ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾಲೇಜುಗಳ ನಿರ್ವಹಣೆ ನಡೆಯುತ್ತದೆ. ಕಾಲೇಜಿಗೆ ಬರುವುದಕ್ಕೂ ಮುನ್ನ ಕೊರೋನಾ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. ನೆಗೆಟಿವ್ ಪತ್ರವನ್ನು ತಂದವರಿಗೆ ಮಾತ್ರ ಕಾಲೇಜಿಗೆ ಅವಕಾಶ ನೀಡಲಾಗುತ್ತದೆ. ಪರೀಕ್ಷೆಗಳನ್ನು ಮಾರ್ಚ್ ಅಂತ್ಯದಲ್ಲಿ ಅಥವಾ ಏಪ್ರಿಲ್ ನಲ್ಲಿ ನಡೆಸಲು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
📣
ನವೆಂಬರ್ 17 ರಂದು ಕಾಲೇಜುಗಳ ಆರಂಭಕ್ಕೆ ನಿರ್ಧರಿಸಲಾಗಿದೆ.ಮಾನ್ಯ ಮುಖ್ಯಮಂತ್ರಿ @BSYBJP ಅವರ ನೇತೃತ್ವದಲ್ಲಿ ಕಾಲೇಜು ಆರಂಭದ ಬಗ್ಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಹಾಗೂ ಡಿಪ್ಲೋಮ ಕಾಲೇಜುಗಳ ಪುನರಾರಂಭ ಕುರಿತು ಎಲ್ಲ ಇಲಾಖೆಗಳ ಜತೆ ಚರ್ಚಿಸಲಾಗಿದೆ.@CMofKarnataka
1/3 pic.twitter.com/70lJIMVy6G— Dr. Ashwathnarayan C. N. (@drashwathcn) October 23, 2020
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ