ಬೆಂಗಳೂರು: 2020-21 ನೇ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸುವ ರಾಜ್ಯ ಸರಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.
ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಪರೀಕ್ಷೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಂಡು, ಎರಡು ದಿನಗಳಲ್ಲಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿತ್ತು. ಇದನ್ನು ಪ್ರಶ್ನಿಸಿ ಸಿಂಗ್ರೇ ಗೌಡ ಎನ್ನುವವರು ಕರ್ನಾಟಕ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು.
ಈ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಹಂಚಾಟೆ ಸಂಜೀವ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ರಾಜ್ಯ ಸರಕಾರದ ನಿರ್ಧಾರವನ್ನು ಎತ್ತಿ ಹಿಡಿದಿದ್ದಾರೆ. ಅಲ್ಲದೇ ಪರೀಕ್ಷೆ ನಡೆಸಲು ಸರಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಈ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಪೀಠ, ” ನ್ಯಾಯಾಲಯವು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಎಲ್ಲಾ ವಿದ್ಯರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂಧಿಗಳು ಪಾಲಿಸಬೇಕಾದ ಎಸ್ ಪಿ ಓ ವನ್ನು ಸುತ್ತೋಲೆ ರೂಪದಲ್ಲಿ ನೀಡುವ ಮೂಲಕ ಪರೀಕ್ಷೆಯನ್ನು ನಡೆಸಲು ರಾಜ್ಯಸರ್ಕಾರ ಕಾಳಜಿ ವಹಿಸಿದೆ ಎಂದು ನಾವು ಕಂಡುಕೊಂಡಿದ್ದೇವೆ. ಈ ಅರ್ಜಿಯಲ್ಲಿ ನಮಗೆ ಯಾವುದೇ ಗಮನಾರ್ಹ ಅಂಶಗಳು ಕಂಡುಬಂದಿಲ್ಲ. ಆದ್ದರಿಂದ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿರಿ: ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ಬಹುತೇಕ ಕಡೆ ಭಾರೀ ಮಳೆಯ ನಿರೀಕ್ಷೆ