SSLC Exam 2021: ವಿದ್ಯಾರ್ಥಿಗಳಿಗೆ ಕೆಎಸ್‌ಆರ್ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಾವಕಾಶ

karnataka-sslc-exam-2021-free-service-for-sslc-students-in-ksrtc-buses-on-july-19-and-july-22

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಜುಲೈ 19 ಹಾಗೂ 22 ರಂದು ವಿದ್ಯರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಈ ಬಾರಿ ಕೊರೋನಾ ಕಾರಣದಿಂದ ಪರೀಕ್ಷೆಗಳನ್ನು ಸರಳವಾಗಿ ನಡೆಸಲು ಸರಕಾರ ತೀರ್ಮಾನಿಸಿದ್ದು, ಜುಲೈ 19 ಹಾಗೂ 22 ರಂದು ಪರೀಕ್ಷೆಗಳು ನಡೆಯಲಿವೆ. ಈ ಎರಡೂ ದಿನಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯರ್ಥಿಗಳು ವಾಸದ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಯೋಸಬಹುದಾಗಿದೆ.

ಇದನ್ನೂ ಓದಿರಿ: ಗ್ರಾಮೀಣ ಪ್ರದೇಶದ ವಿದ್ಯರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಗ್ರಾಮಪಂಚಾಯತ್ ಗ್ರಂಥಾಲಯಗಳಲ್ಲಿ ಡಿಜಿಟಲ್ ಸ್ಕೂಲ್

ಈ ಕುರಿತಂತೆ ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಕಳಸದ್ ಅವರು ಆದೇಶವನ್ನು ಹೊರಡಿಸಿದ್ದಾರೆ. ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಉಚಿತ ಸೇವೆಗೆ ಅವಕಾಶ ಕಲ್ಪಿಸಲಾಗಿದ್ದು, ಮನೆಗೆ ವಾಪಸ್ ಬರುವಾಗಲೂ ಈ ನಿಯಮ ಅನ್ವಯವಾಗಲಿದೆ. ಕೆಎಸ್ಆರ್ಟಿಸಿ ವಾಹನದಲ್ಲಿ ಪ್ರಯಾಣಿಸುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್

LEAVE A REPLY

Please enter your comment!
Please enter your name here