karnataka-sslc-exam-2021-sample-question-paper-released

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ಎಸ್ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ ಮಾಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ವಿಶೇಷವಾಗಿ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದ್ದು, ಪ್ರಶ್ನೆಪತ್ರಿಕೆಯ ಮಾದರಿಯನ್ನು ಬೋರ್ಡ್ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಿದೆ. ವಿದ್ಯಾರ್ಥಿಗಳು ವೆಬ್​ಸೈಟ್ www.sslc.Karnataka.gov.in ಗೆ ಭೇಟಿ ನೀಡಿ ಗಣಿತ, ವಿಜ್ಞಾನ ಮತ್ತು ಸಮಾಜವಿಜ್ಞಾನದ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪಡೆದುಕೊಳ್ಳಬಹುದಾಗಿದೆ.

ಕೊರೋನಾ ಸೋಂಕಿನ ತೀವ್ರತೆಯಿಂದಾಗಿ ಪರೀಕ್ಷೆ ನಡೆಸಲು ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ವಿಧಾನವನ್ನು ಸರಳೀಕರಣಗೊಳಿಸಲಾಗಿದೆ. ಈ ಮಾದರಿ ಪ್ರಶ್ನಾ ಪತ್ರಿಕೆಯಲ್ಲಿ ತಲಾ 40 ಅಂಕಗಳ ಮೂರೂ ವಿಷಯದ ಪ್ರಶ್ನೆಗಳಿವೆ. ಈ ಪ್ರಶ್ನೆ ಪತ್ರಿಕೆ ಬರೆಯಲು ಮೂರೂ ಗಂಟೆಗಳ ಸಮಯಾವಕಾಶವಿದ್ದು, ಎಲ್ಲವೂ ಬಹುಆಯ್ಕೆಯ ಪ್ರಶ್ನೆಗಳಾಗಿವೆ. ಉತ್ತರ ಬರೆಯಲು ಪ್ರತ್ಯೇಕವಾದ ಓಎಂಆರ್ ಶೀಟನ್ನು ನೀಡಲಾಗುತ್ತಿದ್ದು, ಅದರ ಮಾದರಿಯನ್ನೂ ಸಹ ವೆಬ್ ಸೈಟ್ ನಲ್ಲಿ ಒದಗಿಸಲಾಗಿದೆ.

ಸದ್ಯ ಈ ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯಸಿಸಲು ಸೂಚಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಮಾತೃಭಾಷೆ ಸೇರಿದಂತೆ ಮೂರೂ ವಿಷಯಗಳ ಪ್ರಶ್ನೆಪತ್ರಿಕೆಯನ್ನು ಒದಗಿಸಲಾಗುವುದು ಎಂದು ತಿಳಿಸಲಾಗಿದೆ. ತಾವು ಪ್ರಶ್ನೆಪತ್ರಿಕೆಯನ್ನು ಪಡೆದುಕೊಳ್ಳಲು ನೇರವಾಗಿ ಭೇಟಿ ನೀಡಿ. ವೆಬಸೈಟ್

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here