SSLC Exam 2023: ಪರೀಕ್ಷೆ’ಯ ‘ಅಂತಿಮ ವೇಳಾಪಟ್ಟಿ’ ಪ್ರಕಟ, ಇಲ್ಲಿದೆ ವೇಳಾಪಟ್ಟಿ

karnataka-sslc-2023-annual-exam-provisional-time-table-released

ಬೆಂಗಳೂರು: ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ( Karnataka SSLC Exam 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪ್ರಕಟಿತ ಪಟ್ಟಿಗೆ ಆಕ್ಷೇಪಗಳಿದ್ದರೆ ಸಲ್ಲಿಸಲು ಕೋರಲಾಗಿತ್ತು. ಆಕ್ಷೇಪಗಳನ್ನು ಪರಿಶೀಲಿಸಿದ ನಂತರ ಈಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ( SSLC Exam Timetable 2023 ) ಪ್ರಕಟಿಸಿದೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಅಂತಿಮ ಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ ತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ( SSLC Exam Timetable 2023 ) ನೇರವಾಗಿ ಮಂಡಳಿಯ ವೆಬ್ ಸೈಟ್ ಗೆ ತೆರಳಿ ಪ್ರಕಟಣೆಯ ನೇರ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಕ್ಲಿಕ್ ಮಾಡಿ.

ಇದನ್ನೂ ಓದಿರಿ: SSLC Exam Time Table: ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಆಕ್ಷೇಪಕ್ಕೆ ಅವಕಾಶ

ಹೀಗಿದೆ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ಅಂತಿಮ ವೇಳಾಪಟ್ಟಿ

  • ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಹಾಗೂ ಸಂಸ್ಕೃತ
  • ದಿನಾಂಕ 04-04-2023, ಮಂಗಳವಾರ – ಗಣಿತ ಮತ್ತು ಸಮಾಜಶಾಸ್ತ್ರ
  • ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ ಇಂಗ್ಲೀಷ್, ದ್ವಿತೀಯ ಭಾಷೆ ಕನ್ನಡ
  • ದಿನಾಂಕ 08-04-2023, ಶನಿವಾರ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
  • ದಿನಾಂಕ 10-04-2023, ಸೋಮವಾರ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
  • ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
  • ದಿನಾಂಕ 15-04-2023, ಶನಿವಾರ – ಸಮಾಜ ವಿಜ್ಞಾನ.

LEAVE A REPLY

Please enter your comment!
Please enter your name here