kea-recruitment-2021-for-1242-assistant-professor-posts-apply-before-nov-30

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಲು ಕೋರಲಾಗಿದೆ.

ವಿದ್ಯಾರ್ಹತೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ, ಇಂಗ್ಲೀ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯ ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್ ಟೆಕ್ನಾಲಜಿ ವಿಷಯಳಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವುದರ ಜೊತೆಗೆ ಎನ್ಇಟಿ ಅಥವಾ ಕೆಸೆಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 30, 2021ರ ಅನ್ವಯ ಕನಿಷ್ಟ 22 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ 40 ವರ್ಷ (ಜನ್/ಯುಆರ್), 43 ವರ್ಷ (OBC-2A/2B/3A/3B) ಮತ್ತು 45 ವರ್ಷ (SC/ST ಮತ್ತು CAT-I) ವಯೋಮಿತಿಯೊಳಗಿರಬೇಕು ಎಂದು ಕೆಇಎ ಅಧಿಸೂಚನೆ 2021 ರಲ್ಲಿ ಸೂಚಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಯುಜಿಸಿ ವೇತನ ಶ್ರೇಣಿ ಅನುಸಾರ ತಿಂಗಳಿಗೆ 57700-182400  ರೂಪಾಯಿಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ (Gen/UR, OBC-2A/2B/3A/3B) ರೂ. 2,000/- ಮತ್ತು (SC/ST, CAT-I) ರೂ. 1,000/-  ಅನ್ನು ಅರ್ಜಿ ಶುಲ್ಕವಾಗಿ ಇ-ಪೋಸ್ಟ್ ಮೂಲಕ 6 ಡಿಸೆಂಬರ್ 2021 ರೊಳಗೆ ಪಾವತಿಸಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಕೆ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 7/10/2021
ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30/11/2021
ಇ-ಪೋಸ್ಟ್ ಆಫೀಸ್‌ನಲ್ಲಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ : 6/12/2021

ವೆಬಸೈಟ್
ನೋಟಿಫಿಕೇಶನ್

ಇದನ್ನೂ ಓದಿರಿ: BMTC Recruitment 2021: 10 ನೇ ತರಗತಿ ಪಾಸಾದರಿಗೆ ಬಿಎಂಟಿಸಿಯಲ್ಲಿ ಉದ್ಯೋಗಾವಕಾಶ

LEAVE A REPLY

Please enter your comment!
Please enter your name here