ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳ(KEA Recruitment 2023) ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 100 ಸ್ಟಾಫ್ ನರ್ಸ್ (ನರ್ಸಿಂಗ್ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಮಾಡುವ ಆಸಕ್ತಿ ಹೊಂದಿರುವವರಿಗೆ ಇದು ಸುವರ್ಣಾವಕಾಶವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಇಲ್ಲಿಯೇ ನೇಮಕ ಮಾಡಲಾಗುವುದು ಎಂದು ರಾಜ್ಯ ಸರಕಾರ ಅಧಿಸೂಚನೆಯಲ್ಲಿ ತಿಳಿಸಿದಿ.
ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಹುದ್ದೆಯ ಮಾಹಿತಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳ (KEA Recruitment 2023) ಮೂಲಕ ಭರ್ತಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯು ನಿಮಗೆ ಈ ಕೆಳಗಿನ ಪಟ್ಟಿಯಲ್ಲಿ ಲಭ್ಯಯವಿದೆ.
ಹುದ್ದೆ ನೀಡುವ ಸಂಸ್ಥೆ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ |
ಹುದ್ದೆ | ಸ್ಟಾಫ್ ನರ್ಸ್ |
ಒಟ್ಟು ಹುದ್ದೆಗಳು | 100 |
ವಿದ್ಯಾರ್ಹತೆ | ನರ್ಸಿಂಗ್ ಸರ್ಟಿಫಿಕೇಟ್ |
ವೇತನ | ಮಾಸಿಕ ರೂಪಾಯಿ 33,450 ರಿಂದ 62,600 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ನವೆಂಬರ್ 2, 2023 |
ಇದನ್ನೂ ಓದಿರಿ: CeNS Recruitment 2023: ವಿವಿಧ ನಿರ್ವಾಹಕ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ನರ್ಸಿಂಗ್ ಸರ್ಟಿಫಿಕೇಟ್ನ್ನು ಪಡೆದಿರಲೇಬೇಕು. ಜೊತೆಗೆ ರಿಜಿಸ್ಟರ್ ನರ್ಸ್ ಆಗಿರಬೇಕು.
ವಯೋಮಿತಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಹುದ್ದೆಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 2, 2023 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
SC/ST/ಪ್ರವರ್ಗ- I ಅಭ್ಯರ್ಥಿಗಳು: 05 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು, ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು ಸಡಿಲಿಕೆ ಇರುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
ಅರ್ಜಿ ಶುಲ್ಕ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, SC/ST/ಪ್ರವರ್ಗ-I ಅಭ್ಯರ್ಥಿಗಳು: ರೂಪಾಯಿ 500/-, ಸಾಮಾನ್ಯ/OBC ಅಭ್ಯರ್ಥಿಗಳು: ರೂಪಾಯಿ 750/- ಗಳನ್ನು ಗಣಕೀಕೃತ ಅಂಚೆ ಕಚೇರಿಯಲ್ಲಿ ಪಾವತಿಸಲು ತಿಳಿಸಲಾಗಿದೆ.
ವೇತನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿರುವ ನರ್ಸಿಂಗ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 33,450 ರೂಪಾಯಿಯಿಂದ 62,600 ರೂಪಾಯಿಯವರೆಗೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿರಿ: RailTel Recruitment 2023: ರೈಲ್ವೆ ಇಲಾಖೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಸೇರಿದಂತೆ ಒಟ್ಟು 21 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿರುವ ನರ್ಸಿಂಗ್ ಹುದ್ದೆಗೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕು. ಆ ಮೂಲಕ ಅರ್ಹರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04/10/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/11/2023
ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ : ಕ್ಲಿಕ್ ಮಾಡಿ