ತಿರುವನಂತಪುರಂ: ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲಮ್ಸ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಇದನ್ನೂ ಓದಿರಿ: ಕಾಡಾನೆ ದಾಳಿಗೆ ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ ಆನೆ ಸಾವು
ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಕೋರ್ಟ್ ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹೊಂಬಾಳೆ ಫಿಲಮ್ಸ್ ನವರಿಗೆ ಸಲಹೆಯನ್ನು ನೀಡಿತು.
ಇದನ್ನೂ ಓದಿರಿ: ಗುಟ್ಟಾಗಿ ಎಂಗೇಜ್ ಮೆಂಟ್ ಮಾಡಿಕೊಂಡ ‘ಅಗ್ನಿಸಾಕ್ಷಿ’ ನಟಿ ವೈಷ್ಣವಿ ಗೌಡ !