Varaha Roopam Song: ತಡೆಯಾಜ್ಞೆ ತೆರವು, ವರಾಹರೂಪಂ ಹಾಡು ಬಳಕೆಗೆ ಕೇರಳ ಕೋರ್ಟ್ ಅನುಮತಿ!

kantara-kannada-movie-box-office-collection

ತಿರುವನಂತಪುರಂ: ಕಾಂತಾರ (Kantara) ಚಿತ್ರದ ವರಾಹರೂಪಂ (Varaha Roopam Song) ಹಾಡಿನ ವಿವಾದದಕ್ಕೆ ಸಂಬಂಧಿಸಿದಂತೆ ಕೊನೆಗೂ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲಂಸ್ ಗೆ ಮೊದಲ ಯಶಸ್ಸು ಸಿಕ್ಕಿದ್ದು, ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ನೀಡಿದೆ.

‘ತೈಕ್ಕುಡಂ ಬ್ರಿಡ್ಜ್​​’ ಬ್ಯಾಂಡ್​ನ ‘ನವರಸಂ’ ಹಾಡಿನ ಟ್ಯೂನ್ ನನ್ನು ‘ವರಾಹರೂಪಂ’ ಹಾಡಿನಲ್ಲಿ ಬಳಸಿಕೊಳ್ಳಲಾಗಿದೆ ಎಂದು ಆರೋಪ ಮಾಡಲಾಗಿತ್ತು. ಈ ಸಂಬಂಧ ತೈಕ್ಕುಡಂ ಬ್ರಿಡ್ಜ್​​ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಾಲಯ ತನ್ನ ಮಧ್ಯಂತರ ಆದೇಶದಲ್ಲಿ ವರಾಹರೂಪಂ ಹಾಡನ್ನು ಬಳಕೆ ಮಾಡದಂತೆ ತಿಳಿಸಿತ್ತು.

ಇದನ್ನೂ ಓದಿರಿ: ‘ಕಾಂತಾರ’ ಚಿತ್ರದ ನಟಿ ಸಪ್ತಮಿ ಗೌಡ ಅವರ ಸುಂದರ ಫೋಟೋಗಳು

ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಹೊಂಬಾಳೆ ಫಿಲಂಸ್ ಮೇಲ್ಮನವಿಯನ್ನು ಮಾಡಿತ್ತು. ಸದ್ಯ ಕೋರ್ಟ್ ಮೇಲ್ಮನವಿಯನ್ನು ಪುರಸ್ಕರಿಸಿ ಹಾಡನ್ನು ಬಳಕೆ ಮಾಡಿಕೊಳ್ಳಲು ಅವಕಾಶವನ್ನು ಮಾಡಿಕೊಟ್ಟಿದೆ.

ಇದನ್ನೂ ಓದಿರಿ: ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ವರ್ಕೌಟ್ ಫೋಟೋ ಫುಲ್ ವೈರಲ್

ಕೋಝಿಕ್ಕೋಡ್ ನ್ಯಾಯಾಲಯ ಅನುಮತಿ ನೀಡಿದರೂ ಹಾಡಿನ ಬಳಕೆ ಸಾಧ್ಯವಿಲ್ಲ

ಇನ್ನು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವರಹಾ ರೂಪಂ ಹಾಡು ವಿವಾದಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದರೂ ಸದ್ಯಕ್ಕೆ ಚಿತ್ರತಂಡ ಈ ಹಾಡು ಬಳಕೆ ಮಾಡುವಂತಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ ಅರ್ಜಿ ಪಾಲಕ್ಕಾಡ್‌ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಕಾರಣದಿಂದಾಗಿ ಕಾಂತಾರ ಚಿತ್ರದಲ್ಲಿ ವರಾಹರೂಪಂ ಹಾಡನ್ನು ಮೂಲ ರೂಪದಲ್ಲಿ ಪ್ರಸಾರ ಮಾಡಲು ಸಾಧ್ಯವಿಲ್ಲ.

ಇದನ್ನೂ ಓದಿರಿ: ಡಿಸೆಂಬರ್ 18 ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ

LEAVE A REPLY

Please enter your comment!
Please enter your name here