ಸಿಂಗಾಪುರ: ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ರಾಷ್ಟೀಯ ಜನತಾ ದಳ ಪಕ್ಷದ ಲಾಲೂ ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಸೋಮವಾರ ಸಿಂಗಾಪುರದ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆದಿದೆ.
ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿರುವ ಲಾಲೂ ಪ್ರಸಾದ್ ಯಾದವ್ ಅವರಿಗೆ ಅವರ ಪುತ್ರಿ ರೋಹಿಣಿ ಕಿಡ್ನಿಯನ್ನು ದಾನ ಮಾಡಿದ್ದಾರೆ. ಇವರು ಚಿಕಿತ್ಸೆಗೆ ಸಿಂಗಾಪುರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆ ಪೂರ್ಣಗೊಂಡಿದ್ದು, ಯಶಸ್ವಿಯಾಗಿದೆ. ಲಾಲೂ ಪ್ರಸಾದ್ ಅವರನ್ನು ಐಸಿಯುಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ: ಪಿಒಕೆಯನ್ನು ಮರಳಿ ಪಡೆಯುವ ಗುರಿಯನ್ನು ಭಾರತ ಎಂದೂ ಸಾಧಿಸುವುದಿಲ್ಲ: ಪಾಕ್ ಸೇನಾ ಮುಖ್ಯಸ್ಥ
ಲಾಲೂ ಪ್ರಸಾದ್ ಯಾದವ್ ಅವರ ಕಿರಿಯ ಮಗ ಹಾಗೂ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಈ ಕುರಿತಾದ ವಿಡಿಯೋವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಲಾಲೂಪ್ರಸಾದ್ ಯಾದವ್ ಅವರಿಗೆ ಪ್ರಜ್ಞೆ ಬಂದಿದ್ದು, ಎಲ್ಲರೊಂದಿಗೆ ಮಾತನಾಡುತ್ತಿದ್ದಾರೆ. ನಿಮ್ಮೆಲ್ಲರ ಹಾರೈಕೆಗಳಿಗೆ ನಾನು ಥ್ಯಾಂಕ್ಸ್ ಹೇಳುತ್ತಿದ್ದೇನೆ ಎಂದು ಬರೆದಿದ್ದಾರೆ.
पापा का किडनी ट्रांसप्लांट ऑपरेशन सफलतापूर्वक होने के बाद उन्हें ऑपरेशन थियेटर से आईसीयू में शिफ्ट किया गया।
डोनर बड़ी बहन रोहिणी आचार्य और राष्ट्रीय अध्यक्ष जी दोनों स्वस्थ है। आपकी प्रार्थनाओं और दुआओं के लिए साधुवाद। 🙏🙏 pic.twitter.com/JR4f3XRCn2
— Tejashwi Yadav (@yadavtejashwi) December 5, 2022