ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರವೋ ಅಥವಾ ದೇಶವನ್ನು ಉಳಿಸುವ ದೇಶಭಕ್ತರ ಪರವೋ ಎನ್ನುವುದನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆಯವರು ಸ್ಪಷ್ಟಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಪ್ರತಿ ಬಾರಿ ದೇಶದ ನೈತಿಕತೆ ಹಾಗೂ ಪೋಲೀಸರ ನೈತಿಕತೆ ಕಡಿಮೆ ಮಾಡುವಂತೆ ಮಾತನಾಡುವುದು ದೇಶಭಕ್ತರ ಕೆಲಸವಲ್ಲ. ತಾವು ಯಾರ ಪರ ಎಂದು ಸ್ಪಷ್ಟಪಡಿಸಿದರೆ ಜನ ತೀರ್ಮಾನ ತೆಗೆದುಕೊಳ್ಳುತ್ತಾರೆ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗಲೂ ಅದರ ಪ್ರತಿಕ್ರಿಯೆ ಮತ್ತು ತನಿಖೆಯನ್ನು ಪ್ರಶ್ನೆ ಮಾಡುವುದು ಭಯೋತ್ಪಾದಕರಿಗೆ ನೈತಿಕ ಬಲ ನೀಡಿದಂತೆ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ:Bharat Jodo Yatra: 100 ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್‌ನ ʻಭಾರತ್ ಜೋಡೋ ಯಾತ್ರೆ
ಇನ್ನು ಡಿ ಕೆ ಶಿವಕುಮಾರ್ ಅವರ ಓಟರ್ ಐಡಿ ಆರೋಪಕ್ಕೆ ಪ್ರತಿಕ್ರಿಯಿಸಿ, 2017 ರಲ್ಲಿ ಚಿಲುಮೆ ಸಂಸ್ಥೆಗೆ ಆಜ್ಞೆ ಕೊಟ್ಟಿದ್ದೆ ಕಾಂಗ್ರೆಸ್ ಎನ್ನುವುದನ್ನು ಡಿ ಕೆ ಶಿವಕುಮಾರ್ ಮರೆಯಬಾರದು. ಕಾನೂನು ಬಾಹಿರ ಮತ ಹಾಕಿಸುವುದು ಕಾಂಗ್ರೆಸ್ ಪದ್ಧತಿ. ನಾವು ತನಿಖೆಯನ್ನು ಮಾಡಿಸಿ, ಬಂಧನವನ್ನೂ ಮಾಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿರಿ: ಮಂಗಳೂರು ಕುಕ್ಕರ್ ಸ್ಫೋಟ: ಶಾರಿಕ್ ನನ್ನು ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ -ಡಿಕೆಶಿ ಪ್ರಶ್ನೆ