ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೆಯ ಅಲೆಯ ಪ್ರಭಾವ ಜೋರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಈಗಿರುವ ಲಾಕ್ ಡೌನ್ ನ್ನು ಜೂನ್ 1 ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿಯಮ ಜೂನ್ 1ರ 7 ಗಂಟೆಯವರೆಗೆ ಅನ್ವಯವಾಗಲಿದೆ ಎಂದು ಹೊಸ ಆದೇಶದಲ್ಲಿ ತಿಳಿಸಲಾಗಿದೆ. ಇದಲ್ಲದೇ ಹೊರ ರಾಜ್ಯದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರೂ ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ತರುವುದು ಅವಶ್ಯವಾಗಿದೆ. ರಾಜ್ಯದಲ್ಲಿ ಅವಶ್ಯಕ ಸಾಮಗ್ರಿಗಳ ಖರೀದಿಗೆ ಸಡಿಲಿಕೆ ನೀಡಲಾಗಿದ್ದು, ಜೂನ್ 1 ವರೆಗೂ ಕಠಿಣ ಲಾಕ್ ಡೌನ್ ಜಾರಿಗೆ ತರಲಾಗಿದೆ.
Maharashtra Government extends the current COVID19 restrictions in the state till 7am on 1st June, to fight COVID19; negative RT-PCR report mandatory for those entering the state pic.twitter.com/jjccnpP6KV
— ANI (@ANI) May 13, 2021