ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು (Bharat Jodo Yatra) ಸಹಾಯ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಕುರಿತು ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿಯವರು ನಡೆಸುತಿಯಿರುವ ಭರತ್ ಜೋಡೋ ಯಾತ್ರೆ ಹಿಮಾಚಲ ಪ್ರದೇಶದ ಜನತೆಗೆ ಮೆಚ್ಚುಗೆಯಾಗಿದೆ. ನಾನು ಅಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ ಅಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶಕ್ಕಾಗಿಯೇ ಜಾರಿಗೆ ತರಲು ಕೆಲವು ಕಾರ್ಯಕ್ರಮಗಳ ಪಟ್ಟಿಯನ್ನು ಜನರ ಮುಂದಿಟ್ಟಿದ್ದೆವು. ಆ ಕಾರ್ಯಕ್ರಮಗಳು ಜನರಿಗೆ ಇಷ್ಟವಾಗಿವೆ. ಹೀಗಾಗಿ ಅಭೂತಪೂರ್ವವಾಗಿ ಗೆಲ್ಲಿಸಿ ಕಳಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ರಾಜೀನಾಮೆ