ಎರಡು ದಶಕಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಹಿರಿಯ ನಾಯಕ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ 22 ವರ್ಷಗಲ್ಲಿ ಇದೇ ಮೊದಲಬಾರಿಗೆ ಗಾಂಧಿ ಕುಟುಂಬಿತರ ವ್ಯಕ್ತಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದಂತಾಗಿದೆ. 

mallikarjun-kharge-wins-the-congress-presidential-elections-with-7897-votes

ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಳೆದ ಸೋಮವಾರ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಹಿರಿಯ ನಾಯಕ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ 22 ವರ್ಷಗಲ್ಲಿ ಇದೇ ಮೊದಲಬಾರಿಗೆ ಗಾಂಧಿ ಕುಟುಂಬಿತರ ವ್ಯಕ್ತಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದಂತಾಗಿದೆ.

ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯಲ್ಲಿ ಹಿರಿಯ ನಾಯಕ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7,897 ಮತಗಳು ಹಾಗೂ ಸಂಸದ ಶಶಿ ತರೂರ್ ಅವರಿಗೆ 1,072 ಮತಗಳು ಲಭಿಸಿವೆ. ಇನ್ನುಳಿದ  400 ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿವೆ.

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಪರಾಜಿತ ಅಭ್ಯರ್ಥಿ ಶಶಿ ತರೂರ್ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಪುನರುಜ್ಜೀವನ ಆರಂಭವಾಗಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿಕೆಯಲ್ಲಿ ಶಶಿ ತರೂರ್ ಹೇಳಿದ್ದಾರೆ. ಮೊನ್ನೆ ಮತದಾನದ ದಿನವೂ ಶಶಿ ತರೂರ್ ಈ ಮಾತುಗಳನ್ನು ಹೇಳಿದ್ದರು.

ಇದನ್ನೂ ಓದಿರಿ: Defence Expo 2022: ಇಂಡೋ-ಪಾಕ್‌ ಗಡಿಯಲ್ಲಿ ಹೊಸ ವಾಯುನೆಲೆ ನಿರ್ಣಾಯಕ ಎಂದ ಪ್ರಧಾನಿ ಮೋದಿ

LEAVE A REPLY

Please enter your comment!
Please enter your name here