ಆಟೋದಲ್ಲಿ ನಿಗೂಢ ಸ್ಫೋಟ: ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

mangaloreauto-blastaccused-arrest

ಮಂಗಳೂರು: ಪಟ್ಟಣದ ನಾಗುರಿ ಬಳಿ ಶನಿವಾರ ಸಂಜೆ ಆಟೋದಲ್ಲಿ ಉಂಟಾದ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಶಂಕಿತನನ್ನು ಬಂಧಿಸಿದ್ದಾರೆ.

ಕಂಕನಾಡಿ ನಾಗರಿ ಬಳಿ ನಿನ್ನೆ ರಾತ್ರಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ನಡೆದಿತ್ತು. ಸ್ಫೋಟದ ರಭಸಕ್ಕೆ ಆಟೋದಲ್ಲಿದ್ದ ಕುಕ್ಕರ್ ಛಿದ್ರ ಛಿದ್ರಗೊಂಡಿತ್ತು. ಘಟನೆಯಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಸ್ಪೋಟಗೊಂಡ ಆಟೋದಲ್ಲಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ದೊರೆತಿವೆ. ಆಟೋದಲ್ಲಿ ಎರಡು ಬ್ಯಾಟರಿ, ಮೊಬೈಲ್, ಮಲ್ಟಿಮೀಟರ್, ವೈರ್​ಗಳು, ಮಿಕ್ಸರ್ ಜಾರ್​ಗಳು, ಪ್ರೆಶರ್ ಕುಕ್ಕರ್, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಸೇರಿದಂತೆ ಹಲವು ಸ್ಪೋಟಕಗಳು ಪತ್ತೆಯಾಗಿವೆ. ಸಿಕ್ಕ ವಸ್ತುಗಳನ್ನು ವಿಧಿ ವಿಜ್ಞಾನ ತಂಡ ಪರೀಕ್ಷೆಗೊಳಪಡಿಸಿದೆ. ಇದರೊಂದಿಗೆ ಒಂದು ಮೊಬೈಲ್, ಎರಡು ನಕಲಿ ಆಧಾರ್ ಕಾರ್ಡ್, ಒಂದು ನಕಲಿ ಪ್ಯಾನ್ ಕಾರ್ಡ್, ಒಂದು ಫಿನೋ ಡೆಬಿಟ್ ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿರಿ: ತಮನ್ನಾ ಮದುವೆಗೆ ರೆಡಿ, ವರ ಯಾರು ಗೊತ್ತಾ? ಇಲ್ಲಿದೆ ಮಾಹಿತಿ

ಇದು ಉಗ್ರರ ಕೃತ್ಯ ಎಂಬುದು ಬಯಲಾಗಿದ್ದು, ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಆತನಿಗೂ ಗಂಭೀರ ಗಾಯಗಳಾಗಿದ್ದು, ಮಾತನಾಡುವ ಸ್ಥಿತಿಯಲ್ಲಿಲ್ಲ ಎನ್ನಲಾಗಿದೆ. ಕೃತ್ಯಕ್ಕೆ ಪ್ಲಾನ್ ಮಾಡಿದ ಸ್ಥಳಕ್ಕೆ ಸ್ಫೋಟಕ ಕೊಂಡೊಯ್ಯುವಾಗ ದಾರಿ ಮಧ್ಯೆಯೇ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

ಈ ಸ್ಪೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆಟೋ ಚಾಲಕ, ಪ್ರಯಾಣಿಕನನ್ನು ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಕಾದಳ ಇಂದು ಬೆಂಗಳೂರಿನಿಂದ ಮಂಗಳೂರಿಗೆ ತೆರಳಲಿದೆ. ಬೆಂಗಳೂರಿನಿಂದ ಮತ್ತಷ್ಟು ಬಾಂಬ್ ತಜ್ಞರ ತಂಡವೂ ಮಂಗಳೂರಿಗೆ ತೆರಳಲಿದ್ದು, ಸದ್ಯಕ್ಕೆ ಮಂಗಳೂರು ಪೊಲೀಸರು ಇಡೀ ಘಟನೆ ಬಗ್ಗೆ ಕೂಲಂಕುಶ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿರಿ: Nandini Milk Price: ಹಾಲಿನ ದರ ಹೆಚ್ಚಳ ಕುರಿತಂತೆ ಇಂದು ಸಿಎಂ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ

LEAVE A REPLY

Please enter your comment!
Please enter your name here