Mangaluru District Court Recruitment 2023:10th, 12th ಪಾಸ್ ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ

Mangaluru District Court Recruitment 2023

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ (Mangaluru District Court Recruitment 2023) ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುವ ಆಸಕ್ತಿ ಹಾಗೂ ಉದ್ಯೋಗಕ್ಕೆ ಅಗತ್ಯವಾದ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಶೀಘ್ರ ಲಿಪಿಗಾರರು, ಬೆರಳಚ್ಚುಗಾರರು ಸೇರಿದಂತೆ ಉಳಿದ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರೆ ತಪ್ಪದೇ ನಮ್ಮ ಟೆಲಿಗ್ರಾಮ್ ಚಾನಲ್ ಹಾಗೂ ವಾಟ್ಸಾಪ್ ಚಾನಲ್ ಗಳಿಗೆ ತಾವು ಜಾಯಿನ್ ಆಗಬಹುದು.(Followers phone numbers are not revealed)

ನೇಮಕಾತಿ ಸಂಸ್ಥೆದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಮಂಗಳೂರು
ವೇತನ ಶ್ರೇಣಿಮಾಸಿಕ 27,650 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ 54
ಉದ್ಯೋಗ ಸ್ಥಳಮಂಗಳೂರು

ಇದನ್ನು ಓದಿ: India Post Recruitment 2023: ಅಂಚೆ ಇಲಾಖೆಯಲ್ಲಿ ನೇರ ನೇಮಕಾತಿ

ಹುದ್ದೆಯ ಮಾಹಿತಿ

ಶೀಘ್ರಲಿಪಿಗಾರರು (Stenographer Grade – III)10
ಬೆರಳಚ್ಚುಗಾರರು (Typist)06
ಬೆರಳಚ್ಚು ನಕಲುಗಾರರು (Typist-Copyist)02
ಜವಾನ (Peon)36

ವಿದ್ಯಾರ್ಹತೆ

ಶೀಘ್ರಲಿಪಿಗಾರರು(Stenographer Grade – III) – 12th, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರರು (Typist) – 12th, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು (Typist-Copyist) – 12th, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜವಾನ – 10th, ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕನ್ನಡ ಓದಲು ಬರೆಯಲು ಬರಬೇಕು ಹೊಂದಿರಬೇಕು.

ವಯೋಮಿತಿ

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಮಂಗಳೂರು ಅಧಿಸೂಚನೆಯ (Mangaluru District Court Recruitment 2023) ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.

ಇನ್ನುಳಿದಂತೆ OBC ಅಭ್ಯರ್ಥಿಗಳಿಗೆ 03 ವರ್ಷಗಳು ಮತ್ತು SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ವರ್ಗದ, Cat- 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ 200 ರೂಪಾಯಿಗಳು ಮತ್ತು
SC/ST/Cat-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ವೇತನ

Mangaluru District Court Recruitment 2023 ರ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ಈ ಕೆಳಗಿನಂತೆ ಮಾಸಿಕ ವೇತನ ನಿಗಧಿಪಡಿಸಲಾಗಿದೆ.

ಶೀಘ್ರಲಿಪಿಗಾರರು (Stenographer Grade – III) – 27,650 ರೂ. ರಿಂದ 52,650 ರೂ.
ಬೆರಳಚ್ಚುಗಾರರು (Typist) – 21,400 ರೂ. ರಿಂದ 42,000 ರೂ.
ಬೆರಳಚ್ಚು ನಕಲುಗಾರರು (Typist-Copyist) – 21,400 ರೂ. ರಿಂದ 42,000 ರೂ.
ಜವಾನ (Peon) – 17,000 ರೂ. ರಿಂದ 28,950 ರೂ.

Mangaluru District Court Recruitment 2023 ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?

  • Mangaluru District Court Recruitment 2023 ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
  • ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧಪಡಿಸಿಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಸಲ್ಲಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅವಶವವಿದ್ದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ನಿಮಗೆ ಅನ್ವಯವಾಗುತ್ತಿದ್ದರೆ ಮಾತ್ರ)
  • ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಮಂಗಳೂರು ಅಧಿಸೂಚನೆ 2023 ರ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು “ಸಲ್ಲಿಸು” ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಸ್ಕ್ರೀನ್ ಶಾಟ್ ತೆಗೆದುಕೊಳ್ಳಿ.

Mangaluru District Court Recruitment 2023 ರ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06 ನವೆಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06 ಡಿಸೇಂಬರ್ 2023

ಇದನ್ನು ಓದಿ: KLE KVK Recruitment 2023:ಚಾಲಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ
ವಾಟ್ಸಾಪ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here