milkha-singh-battles-rough-day-oxygen-saturation-level-dips

ಚಂಡೀಗಢ: ಕೊರೋನಾ ಸೋಂಕಿಗೆ ತುತ್ತಾಗಿದ್ದ ಅಥ್ಲೀಟ್ ಮಿಲ್ಕಾಸಿಂಗ್ (91) ಅವರನ್ನು ಚಂಡೀಗಡದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಕೊರೋನಾ ವಿಭಾಗದಲ್ಲಿ ಹಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಂಕಿನಿಂದ ಗುಣಮುಖರಾದ ಅವರನ್ನು ಬುಧವಾರ ಕೋವಿಡ್ ಅಲ್ಲದ ವೈದ್ಯಕೀಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯ ಸ್ಥಿತಿ ಕುಸಿದಿದ್ದು, ಜ್ವರ ಮತ್ತು ಆಮ್ಲಜನಕದ ಮಟ್ಟದಲ್ಲಿ ಕುಸಿತ ಉಂಟಾಗಿದೆ ಎಂದು ಹೇಳಲಾಗಿದೆ.

ಆಸ್ಪತ್ರೆಯ ವೈದ್ಯಕೀಯ ತಂಡ ನಿರಂತರ ಅವರ ಆರೋಗ್ಯದ ಮೇಲೆ ನಿಗಾ ಇಟ್ಟುಕೊಂಡಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿರಿ: ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಕಳೆದ ಭಾನುವಾರ ಮಿಲ್ಕಾ ಸಿಂಗ್ ಅವರ ಪತ್ನಿ ನಿರ್ಮಲ್ (85) ಅವರು ಕೋವಿಡ್-19 ಸೋಂಕಿನಿಂದ ನಿಧನರಾಗಿದ್ದಾರೆ. ಅವರು ಹಿಂದೆ ಪಂಜಾಬ್ ಸರ್ಕಾರದ ಮಹಿಳಾ ಕ್ರೀಡಾ ನಿರ್ದೇಶಕ ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ವಾಲಿಬಾಲ್ ತಂಡದ ಕ್ಯಾಪ್ಟನ್ ಸಹ ಆಗಿದ್ದರು.

LEAVE A REPLY

Please enter your comment!
Please enter your name here