ರಾಜ್ಯದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ಶಿವಸಂಚಾರ ನಾಟಕೋತ್ಸವ ಬೆಳ್ಳಿಹಬ್ಬ ಸಮಾರಂಭದಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, 2023 ಕ್ಕೆ ಅಂತರರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮೇಳ ಏರ್ಪಡಿಸಲಾಗುವುದು. ಸಿರಿಧಾನ್ಯವನ್ನು ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯಸರ್ಕಾರ ಈಗಾಗಲೇ ಮದ್ಯಾಹ್ನ ಬಿಸಿಯೂಟ ಯೋಜನೆಯನ್ನು ಆರಂಭಿಸಿದ್ದು, ಇದರಿಂದಾಗಿ ಬಡ ಮಕ್ಕಳಿಗೆ ಅನುಕೂಲವಾಗಲಿದೆ. ಅಲ್ಲದೇ ಬಿಸಿಯೂಟದಲ್ಲಿ ಸಿರಿ ದಾನ್ಯಗಳನ್ನು ನೀಡುವುದರಿಂದ ಮಕ್ಕಳ ಆರೋಗ್ಯದ ಮಟ್ಟವು ಹೆಚ್ಚಲಿದೆ ಎಂದು ಅವರು ಹೇಳಿದ್ದಾರೆ.
ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರೆಯಬೇಕು. ರೈತರು ಹೆಚ್ಚೆಚ್ಚು ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಬೇಕಾಗಿದ್ದು, ರಾಜ್ಯ ಸರಕಾರ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಪ್ರೋತ್ಸಾಹ ನೀಡಲಿದೆ. ಇದಲ್ಲದೇ ಮಾನ್ಯ ನರೇಂದ್ರಮೋದಿಯವರು ರೈತರ ಅನುಕೂಲಕ್ಕಾಗಿ ಆತ್ಮನಿರ್ಭರ ಭಾರತ ಯೋಜನೆಯ ಅಡಿಯಲ್ಲಿ 10 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿರಿ: ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ : ಶೀಘ್ರವೇ ಟಿವಿ ಚಾನಲ್ ದರ ಶೇ. 50 ರಷ್ಟು ಏರಿಕೆ ಸಾಧ್ಯತೆ