ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪುತ್ರ ಮತ್ತು ಸೊಸೆ ಹೋಗುತ್ತಿದ್ದ ಲ್ಯಾಂಡ್ ರೋವರ್ ಕಾರು ಮತ್ತು ಲಾರಿ ನಡುವೆ ಅಪಘಾತ ಉಂಟಾಗಿದೆ. ಈ ಅಪಘಾತದಿಂದ ಜಗದೀಶ್ ಶೆಟ್ಟರ್ ಪುತ್ರ ಮತ್ತು ಸೊಸೆಗೆ ಅಪಘಾತದಲ್ಲಿ ಚಿಕ್ಕ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ದಾವಣಗೆರೆಯ ಸಮೀಪ ಕುಂದವಾಡ ಬಳಿಯ NH-4 ನಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಈ ಸಮಯದಲ್ಲಿ ಲ್ಯಾಂಡ್ ರೋವರ್ ಕಾರಿನಲ್ಲಿದ್ದ ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್ ಮತ್ತು ಸೊಸೆ ಅಂಚಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ತಕ್ಷಣವೇ ಅವರನ್ನು ಹತ್ತಿರದ ಎಸ್  ಎಲ್ ಹೆಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ದಕ್ಷಿಣ ಸಂಚಾರ ಠಾಣೆ  ಪೊಲೀಸರು ಆಗಮಿಸಿ ತಪಾಸಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here