mla-zamir-ahmed-khan-confirmed-with-coronavirus

ಬೆಂಗಳೂರು: ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದರು ಎನ್ನಲಾಗಿದೆ. ಈಗ ವರದಿ ಬಂದಿದ್ದು, ಸೋಂಕು ಇರುವುದು ದೃಡ ಪಟ್ಟಿದೆ. ಈ ಕುರಿತಂತೆ ಅವರು ಟ್ವೀಟ್ ಮಾಡಿದ್ದು, ‘ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here